ಬೈಕ್‌ನ ಹಿಂಬದಿಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗಲು ಹೊಸ ನಿಯಮ
ನವದೆಹಲಿ, ಅ. ೨೬: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (ಎಂಒಆರ್‌ಟಿಎಚ್), ಸಣ್ಣ ಮಕ್ಕಳನ್ನು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಹೊಸ ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. ಪ್ರಸ್ತಾವಿತ ನಿಯಮಗಳ ಪ್ರಕಾರ, ೪ ವರ್ಷದೊಳಗಿನ ಮಕ್ಕಳನ್ನು ಮೋಟಾರ್ ಸೈಕಲ್‌ನ ಹಿಂಬದಿಯಲ್ಲಿ ಕೂರಿಸಿಕೊಂಡು ಹೋಗುವಾಗ ವೇಗವು ಗಂಟೆಗೆ ೪೦ ಕಿ.ಮೀ.ಗಿಂತ ಹೆಚ್ಚಿರಬಾರದು. ಅಲ್ಲದೇ ೯ ತಿಂಗಳಿAದ ೪ ವರ್ಷದೊಳಗಿನ ಮಕ್ಕಳನ್ನು ಕೂರಿಸಿಕೊಂಡು ಹೋಗುವುದಾದರೆ ಕ್ರ‍್ಯಾಶ್ ಹೆಲ್ಮೆಟ್ ಧರಿಸಬೇಕು ಎಂದಿದೆ. ಸಚಿವಾಲಯ ಹೊರಡಿಸಿದ ಕರಡು ಅಧಿಸೂಚನೆಯ ಪ್ರಕಾರ, ೪ ವರ್ಷದೊಳಗಿನ ಮಗುವನ್ನು ಮೋಟಾರ್ ಸೈಕಲ್‌ನಲ್ಲಿ ಕೂರಿಸಿ ಕೊಂಡು ಹೋಗುವಾಗ ವೇಗವು ೪೦ ಕಿ.ಮೀ.ಗಿಂತ ಹೆಚ್ಚಿರಬಾರದು. ಮೋಟಾರ್ ಸೈಕಲ್ ಹಿಂಬದಿಯಲ್ಲಿ ಕುಳಿತ ಮಗುವನ್ನು ಸವಾರನೊಂದಿಗೆ ಕೂಡಿಸುವಂತಹ ಸುರಕ್ಷತಾ ಪಟ್ಟಿಯನ್ನು ಒದಗಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಕುರಿತು ಟ್ವೀಟ್ ಮಾಡಿದ್ದಾರೆ. ಈ ಕರಡು ನಿಯಮಗಳಿಗೆ ಸಂಬAಧಿಸಿದAತೆ ಯಾವುದೇ ಆಕ್ಷೇಪಣೆ ಮತ್ತು ಸಲಹೆ ಇದ್ದಲ್ಲಿ, ಅದನ್ನು ನೀಡುವಂತೆ ಎಂಒಆರ್‌ಟಿಎಚ್ ಕೇಳಿದೆ.
ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್‌ಗೆ ಸಿಗದ ಜಾಮೀನು
ಮುಂಬೈ, ಅ. ೨೬: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬAಧಿಸಿದAತೆ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ನ್ಯಾಯಾಲಯ ಈಗ ಪ್ರಕರಣದ ಸಹ-ಆರೋಪಿ ಅರ್ಬಾಜ್ ಮರ್ಚೆಂಟ್ ಜಾಮೀನು ಅರ್ಜಿಯ ವಿಚಾರಣೆ ನಡೆಸುತ್ತಿದೆ. ಆರ್ಯನ್ ಖಾನ್ ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎನ್‌ಸಿಬಿ, ಆರ್ಯನ್ ಖಾನ್ ಕೇವಲ ಡ್ರಗ್ಸ್ ಸೇವಿಸುವುದಲ್ಲದೆ ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಂಗಳವಾರ ಆರೋಪಿಸಿದೆ. ಆರ್ಯನ್ ಖಾನ್ ಮತ್ತು ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ ಎಂಬ ಮಹಿಳೆ ತನಿಖೆಯ ದಾರಿತಪ್ಪಿಸುವ ಪ್ರಯತ್ನದಲ್ಲಿ ಪ್ರಕರಣದ ಸಾಕ್ಷಿ ಮತ್ತು ಸಾಕ್ಷ್ಯಗಳನ್ನು ತಿರುಚುತ್ತಿದ್ದಾರೆ ಎಂದು ಎನ್‌ಸಿಬಿ ಬಾಂಬೆ ಹೈಕೋರ್ಟ್ಗೆ ತಿಳಿಸಿದೆ.