ಮಡಿಕೇರಿ, ಅ. ೨೬: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಶಿಕ್ಷಕರು ಉಪನಿರ್ದೇಶಕರ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯ ಸಹಕಾರ್ಯದರ್ಶಿ ಚೇತನ್, ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ಆದರೆ, ಯಾವುದೇ ಪ್ರಯೋಜನ ವಾಗಿಲ್ಲ. ವಿನೂತನವಾಗಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.

ಸರ್ಕಾರ ಜಾರಿಗೆ ತಂದಿರುವ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಗೊಳಿಸಬೇಕು. ಸೇವಾವದಿ üಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ ಮಾಡಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಬೇಕು. ಇಲ್ಲದಿದ್ದರೆ ೩,೫೦೦ ಶಿಕ್ಷಕರೊಂದಿಗೆ ಕಾಲ್ನಡಿಯಲ್ಲಿ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅ. ೨೯ರ ವರೆಗೆ ಕಪ್ಪುಪಟ್ಟಿ ಧರಿಸಿ ಶಾಲಾ ಶಿಕ್ಷಣಿಕ ಚಟುವಟಿಕೆ ನಿರ್ವಸುತ್ತಾ ಧರಣಿ ನಡೆಸಲಾಗುವುದು. ನಂತರ ಅ.೩೦ರಿಂದ ನ. ೧೧ರ ವರೆಗೆ ಬಿಸಿಯೂಟ ಮಾಹಿತಿ ಅಪ್ಡೇಟ್ ಮಾಡದೇ ಅಸಹಕಾರ ವ್ಯಕ್ತಪಡಿಸಲಾಗುವುದು. ನಂತರ, ನ. ೧೧ ರಿಂದ ೧೮ರ ವರೆಗೆ ಸ್ಟಾö್ಯಟ್ಸ್ ಮಾಹಿತಿ ಮಾಡದೇ ಸರ್ಕಾರದ ಗಮನ ಸೆಳೆಯಲಾಗುವುದು. ಇದಕ್ಕೂ ಜಗ್ಗದಿದ್ದಲ್ಲಿ ರಾಜ್ಯಮಟ್ಟದಲ್ಲಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಶಿಕ್ಷಣ ಇಲಾಖೆಯ ಉಪನಿದೇರ್ಶಕ ಎಚ್.ಟಿ. ಮಂಜುನಾಥ್ ಅವರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಎಚ್.ಎನ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಟಿ.ಡಿ. ರಮಾನಂದ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಟಿ.ಕೆ. ಬಸವರಾಜು, ಮಡಿಕೇರಿ ತಾಲೂಕು ಅಧ್ಯಕ್ಷ ಮೋಹನ್ ಪೆರಾಜೆ, ಸಂಘಟನಾ ಕಾರ್ಯದರ್ಶಿ ಯೋಗೇಶ್, ಪ್ರಮುಖರಾದ ರೇಖಾ, ಜ್ಯೋತಿ, ಕರುಂಬಯ್ಯ, ಕವಿತಾ ಇದ್ದರು.