ಸೋಮವಾರಪೇಟೆ, ಅ. ೨೬: ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನವಾಗಿ ತೆರೆಯಲಾಗಿರುವ ಗೊಬ್ಬರ, ಕ್ರಿಮಿನಾಶಕ ಮತ್ತು ವ್ಯವಸಾಯೋತ್ಪನ್ನ ಮಾರಾಟ ಮಳಿಗೆಯನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ಹೆಚ್.ಕೆ. ಮಾದಪ್ಪ ಹಾಗೂ ನಿರ್ದೇಶಕರು, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ, ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ರಾಮ್‌ಪ್ರಸಾದ್, ವಿಎಸ್‌ಎಸ್‌ಎನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಉಪಸ್ಥಿತರಿದ್ದರು.