ಸೋಮವಾರಪೇಟೆ, ಅ. ೨೬: ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡಕ್ಕಾಗಿ ನಾನು ಅಭಿಯಾನದ ಅಂಗವಾಗಿ ತಾ. ೨೭ರಂದು(ಇAದು) ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್. ಮಹೇಶ್ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಶಾಂತಳ್ಳಿ ಗಣೇಶ್ ಮತ್ತು ತಂಡದವರಿAದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ನಾಳೆ ಗೀತ ಗಾಯನ: ಕರ್ನಾಟಕ ಸರ್ಕಾರದ ಕನ್ನಡಕ್ಕಾಗಿ ನಾವು ಅಭಿಯಾನದ ಮಾತಾಡ್ ಮಾತಾಡ್ ಕನ್ನಡ ಘೋಷಣೆಯೊಂದಿಗೆ ಲಕ್ಷ ಕಂಠಗಳ ಗೀತಗಾಯನ ಕಾರ್ಯಕ್ರಮದ ಅಂಗವಾಗಿ ತಾ. ೨೮ರಂದು (ನಾಳೆ) ಸಮೂಹ ಗೀತಗಾಯನ ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತಿ ಸಮಿತಿ, ತಾಲೂಕು ಆಡಳಿತ, ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ, ಶಾಲಾ ಕಾಲೇಜುಗಳು ಹಾಗೂ ಎಲ್ಲಾ ಕನ್ನಡಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ತಾ.೨೮ರ ಬೆಳಿಗ್ಗೆ ೧೦.೩೦ಕ್ಕೆ ಪಟ್ಟಣದ ಜೆ.ಸಿ. ವೇದಿಕೆಯಲ್ಲಿ ಸಮೂಹ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಕನ್ನಡಾಭಿಮಾನಿಗಳು ಪಾಲ್ಗೊಳ್ಳಬೇಕೆಂದು ಮಹೇಶ್ ಅವರು ಮನವಿ ಮಾಡಿದ್ದಾರೆ.