ಕೊಡ್ಲಿಪೇಟೆ, ಅ. ೨೬: ಕರ್ನಾಟಕ ರಕ್ಷಣಾ ವೇದಿಕೆಯ ಹೋಬಳಿ ಘಟಕದ ವತಿಯಿಂದ ನವೆಂಬರ್ ೧ರಂದು ಕೊಡ್ಲಿಪೇಟೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ನಿರ್ಧರಿಸಲಾಗಿದೆ.

ಕರವೇ ನಾರಾಯಣಗೌಡ ಬಣದ ಹೋಬಳಿ ಘಟಕದ ಅಧ್ಯಕ್ಷ ಡಿ.ಪಿ. ಭೂಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ವೇದಿಕೆಯ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಯಿತು. ಅಂದು ಬೆಳಗ್ಗೆ ಕೊಡ್ಲಿಪೇಟೆ ಬಸ್ ನಿಲ್ದಾಣದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡುವ ಬಗ್ಗೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಭೂಪಾಲ್, ಈ ಹಿಂದೆ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿತ್ತು. ಕೊರೊನಾ ಹಿನ್ನೆಲೆ ಕಾರ್ಯಕ್ರಮಗಳು ಸ್ಥಗಿತಗೊಂಡಿದ್ದು, ಇದೀಗ ಕೊರೊನಾ ನಿಯಂತ್ರಣಕ್ಕೆ ಬಂದಿರುವುದು ಹಾಗೂ ಸರಳ ಆಚರಣೆಗೆ ಸರ್ಕಾರ ಅವಕಾಶ ನೀಡಿರುವ ಹಿನ್ನೆಲೆ ಕರವೇ ವತಿಯಿಂದ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಯೋಜಿಸಲಾಗುವುದು ಎಂದರು.

ಸಭೆಯಲ್ಲಿ ಕಾರ್ಯದರ್ಶಿ ಡಿ.ಆರ್. ವೇದಕುಮಾರ್, ಪದಾಧಿಕಾರಿಗಳಾದ ಯೋಗಾನಂದ, ಕೆಂಚೇಶ್ವರ್, ಗಿರೀಶ್, ರಾಜೇಶ್, ಕಾಳಯ್ಯ, ಜೆ.ಡಿ. ಮಂಜುನಾಥ್, ರಾಮಕೃಷ್ಣಾಚಾರ್, ಹೇಮಂತ್, ಯೋಗೇಶ್, ಧರ್ಮಣ್ಣ, ಮಂಜುನಾಥ್, ಧರ್ಮ ಕಲ್ಲಳ್ಳಿ, ಮುನ್ನಾ ಸಾಹೇಬ್ ಸೇರಿದಂತೆ ಇತರರು ಭಾಗವಹಿಸಿದ್ದರು.