ಮಡಿಕೇರಿ, ಅ. ೨೬ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಸಹಯೋಗದಲ್ಲಿ ಸ್ವಾತಂತ್ರö್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಹುತಾತ್ಮ ದಿನಾಚರಣೆಯ ಪ್ರಯುಕ್ತ ತಾ. ೩೧ ರಂದು ಬೆಳಿಗ್ಗೆ ೯.೩೦ ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಮಂಡೇಪAಡ ಪಿ.ಅಪ್ಪಚ್ಚು ರಂಜನ್, ಕೊಂಬಾರನ ಜಿ. ಬೋಪಯ್ಯ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಮಂಡೇಪAಡ ಪಿ. ಸುನೀಲ್ ಸುಬ್ರಮಣಿ, ಶಾಂತೆಯAಡ ವೀಣಾ ಅಚ್ಚಯ್ಯ, ಕರ್ನಾಟಕ

(ಮೊದಲ ಪುಟದಿಂದ) ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.ಗುಡ್ಡೆಮನೆ ಅಪ್ಪಯ್ಯಗೌಡ ಸಂಸ್ಮರಣೆ