ಭಾಗಮಂಡಲ, ಅ. ೨೬: ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯ ವಾಜಪೇಯಿ ವಸತಿ ಶಾಲೆ ಗೆ ಶಾಸಕ ಕೆ.ಜಿ.ಬೋಪಯ್ಯ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೋಷಕರು ಹಾಗೂ ಸಾರ್ವಜನಿಕರಿಂದ ಊಟ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ದೂರು ಬಂದ ಹಿನ್ನೆಲೆ ಯಲ್ಲಿ ಕೋರಂಗಾಲ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊAಡ ವಾಜಪೇಯಿ ಶಾಲೆಗೆ ಶಾಸಕರು ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲನೆ ನಡೆಸಿದರು.

ಅಡುಗೆ ಕೊಠಡಿ, ದಾಸ್ತಾನು ಕೊಠಡಿ, ವಿದ್ಯಾರ್ಥಿ, ವಿದ್ಯಾರ್ಥಿನಿ ಯರ ವಸತಿ ಗೃಹಗಳನ್ನು ಪರಿಶೀಲನೆ ನಡೆಸಿ ಅವ್ಯವಸ್ಥೆ ಕಂಡುಬAದ ಹಿನ್ನೆಲೆಯಲ್ಲಿ ಪ್ರಾಂಶುಪಾಲರನ್ನು ತೀವ್ರ ತರಾಟೆಗೆ ತೆಗೆದುಕೊಂಡು ಕೂಡಲೇ ಸರಿಪಡಿಸುವಂತೆ ಸೂಚಿಸಿದರು. ನಂತರ ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದರು. ಈ ಸಂದರ್ಭ ರಾಜ್ಯ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ಮೂಡ ಅಧ್ಯಕ್ಷ ರಮೇಶ್ ಹೊಳ್ಳ, ಗ್ರಾಮ ಪಂಚಾಯಿತಿ ಸದಸ್ಯ ಕಾಳನ ರವಿ, ಪ್ರಮುಖರಾದ ರಾಜೀವ್, ಸಂಜು ಸೇರಿದಂತೆ ಪೋಷಕರು ಹಾಜರಿದ್ದರು.

-ಸುನಿಲ್/ಸುಧೀರ್