ಮಡಿಕೇರಿ, ಅ. ೨೭: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. ೨೯ ರಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ಐಸಿಸಿಎಸ್ ಬಿಪಿಓ ಲಿಮಿಟೆಡ್, ಮೈಸೂರು, ಜಸ್ಟ್ ಡಯಲ್-ಬೆಂಗಳೂರು, ಗ್ರಾಸ್ ರೂಟ್ಸ್- ಮೈಸೂರು, ಇಕ್ವಾಲೈಜ್ ಆರ್ಸಿಎಂ ಸೇವೆಗಳು (ಸರ್ವಿಸ್) ಮೈಸೂರು ಹಾಗೂ ಮಾಂಡೋವಿ ಮೋಟಾರ್ಸ್ ಮೈಸೂರು, ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ ಈ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸು ವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.