ವೀರಾಜಪೇಟೆ, ಅ. ೨೬: ಭಾರತ ದೇಶವು ಪ್ರಜಾಪ್ರಭುತ್ವ ರಾಷ್ಟçವಾಗಿದ್ದು, ಎಲ್ಲಾ ಧರ್ಮಗಳೂ ಒಂದೇ ಎಂಬ ತತ್ವದ ಮೇಲೆ ನೆಲೆನಿಂತಿದೆ.ಧರ್ಮಕ್ಕೆ ಸೀಮಿತವಾಗಿ ಧರ್ಮದ ಒಲೈಕೆಗಾಗಿ ರಾಜಕೀಯ ಮಾಡುವುದು ಶೋಭೆಯಲ್ಲಾ ಎಂದು ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ರಾಜ್ಯಾಧ್ಯಕ್ಷ ಮತ್ತು ಹಿರಿಯ ಹೈಕೋರ್ಟ್ ವಕೀಲ ಎ.ಎಸ್. ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಮ್ಮತ್ತಿ ಎ.ಪಿ.ಸಿ.ಎಮ್.ಎಸ್ ಸಭಾಂಗಣದಲ್ಲಿ ಗಾಂಧೀಜಿ ಜಯಂತಿ ಆಚರಣೆ, ಪ್ರಜಾಪ್ರತಿನಿಧಿ ಸಭೆ ಮತ್ತು ವಿವಿದ ಪಕ್ಷದ ಸದಸ್ಯರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು ಪ್ರಸ್ತುತ ರಾಜಕಾರಣದಲ್ಲಿ ಧರ್ಮ ಆದಾರಿತ ರಾಜಕೀಯ ಕಂಡು ಬಂದಿದ್ದು, ಒಂದು ಧರ್ಮಕ್ಕೆ ಮಾತ್ರ ಸೀಮಿತವಾಗದೆ ಸರ್ವ ಧರ್ಮವು ಒಂದೇ ಎನ್ನುವ ತಳಹದಿಯ ಮೇಲೆ ಸ್ವತಂತ್ರ ರಾಜಕೀಯ ಮಾಡಬೇಕು ಎಂದರು. ಪಕ್ಷ ಸಂಘಟನೆಗೆ ಒತ್ತು ನೀಡಿ ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ ಪಕ್ಷದಲ್ಲಿ ಆಂತರಿಕ ಭಿನ್ನಭಿಪ್ರಾಯಗಳನ್ನು ಮರೆತು ಪಕ್ಷ ಸಂಘಟನೆಯಲ್ಲಿ ತೊಡಗಿಸಿ ಕೊಳ್ಳಬೇಕು, ಮುಂಬರುವ ಚುನಾವಣೆ ಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನ ಶಕ್ತಿಯನ್ನು ತೋರಿಸ ಬೇಕೆಂದು ಕರೆ ನೀಡಿದರು. ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಮಾತನಾಡಿ, ಇಂದು ಕೊಡಗು ಜಿಲ್ಲೆಗೆ ಮಂತ್ರಿ ಸ್ಥಾನಮಾನ ಲಭಿಸದೆ ಅಭಿವೃದ್ಧಿ ಶೂನ್ಯವಾಗಿದೆ ಎಂದು ಆರೋಪಿಸಿ ದರಲ್ಲದೆ, ಪಕ್ಷದಲ್ಲಿ ಭಿನ್ನಮತ ಒಗ್ಗಟ್ಟು ಇಲ್ಲದಾಗಿದೆ. ಆದುದ ರಿಂದ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಶಕ್ತಿಮೀರಿ ಶ್ರಮ ವಹಿಸುವಂತೆ ಮನವಿ ಮಾಡಿದರು. ಅಮ್ಮತ್ತಿ ಕಾರ್ಮಾಡು ವಲಯ ಅಧ್ಯಕ್ಷ ಕುಟ್ಟಂಡ ಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ಹಲವರನ್ನು ಪಕ್ಷದ ಪ್ರಮುಖರು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ವೇದಿಕೆಯಲ್ಲಿ ಹಿರಿಯ ಕಾಂಗ್ರೆಸ್ಸಿಗರಾದ ಕಾವಡಿಚಂಡ ಪೂಣಚ್ಚ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಾನ್ಸನ್, ವಲಯ ಕಾರ್ಯದರ್ಶಿ ಅಂತೋಣಿ ಉಪಸ್ಥಿತರಿದ್ದರು. ಅಮ್ಮತ್ತಿ ಕಾರ್ಮಾಡು ಪಂಚಾಯಿತಿ ಮತ್ತು ಮಾಲ್ದಾರೆ ಹಾಗೂ ಬಿಳುಗುಂದ ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಜರಿದ್ದರು.