ಕೂಡಿಗೆ, ಆ. ೨೭: ಹೆಬ್ಬಾಲೆ ಮತ್ತು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಇತರೆ ಉಪ ರಸ್ತೆಯ ಅಗಲೀಕರಣ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಹೆಬ್ಬಾಲೆ ಮತ್ತು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ೫ ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ನಡೆಯುವ ಸಂದರ್ಭ ಕಳಪೆ ಮಟ್ಟದ ಕಾಮಗಾರಿಗಳು ನಡೆಯದಂತೆ ಗ್ರಾಮಸ್ಥರು ಗಮನ ಹರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಶ್ರೀನಿವಾಸ್, ಕೆ.ಆರ್. ಮಂಜುಳ, ಶಿರಂಗಾಲ ಗ್ರಾ.ಪಂ. ಅಧ್ಯಕ್ಷೆ ಭಾಗೀರಥಿ, ಹೆಬ್ಬಾಲೆ ಗ್ರಾ.ಪಂ. ಅಧ್ಯಕ್ಷ ಹೆಚ್.ಎಸ್. ಮಂಜುನಾಥ, ಉಪಾಧ್ಯಕ್ಷ ಧರ್ಮಪ್ಪ, ಕುಮಾರಿ, ತೊರೆನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವರಾಜ್, ಶಿರಂಗಾಲ ಸಹಕಾರ ಸಂಘದ ಅಧ್ಯಕ್ಷ ಲೋಕೇಶ್ ಸೇರಿದಂತೆ ಹೆಬ್ಬಾಲೆ ಮತ್ತು ಶಿರಂಗಾಲ ಗ್ರಾ.ಪಂ. ಸದಸ್ಯರುಗಳು, ಶಿರಂಗಾಲ ದೇವಾಲಯ ಸಮಿತಿಯ ಅಧ್ಯಕ್ಷ ಮತ್ತು ನಿರ್ದೇಶಕರು ಹಾಜರಿದ್ದರು.