ಮಡಿಕೇರಿ, ಅ. ೨೮: ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷರಾಗಿ ನಗರಸಭಾ ಮಾಜಿ ಸದಸ್ಯ ಕೆ.ಜಿ. ಪೀಟರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎ. ಮಹಮ್ಮದ್ ಫಯಾಜ಼್ ಆಯ್ಕೆಯಾಗಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಹಾಗೂ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಅವರುಗಳ ಶಿಫಾರಸ್ಸಿನ ಮೇರೆಗೆ ಕೆ.ಜಿ. ಪೀಟರ್ ಹಾಗೂ ಎಂ.ಎ. ಮಹಮ್ಮದ್ ಫಯಾಜ಼್ ಅವರನ್ನು ಆಯ್ಕೆ ಮಾಡಿರುವುದಾಗಿ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.