ಸೋಮವಾರಪೇಟೆ, ಅ. ೨೭: ನಗರ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಆಯೋಜಿಸಲಾಗಿರುವ ಜನಸ್ಪಂದನಾ ಕಾರ್ಯಕ್ರಮಕ್ಕೆ ವಾರ್ಡ್ ೧ ರಿಂದ ಚಾಲನೆ ನೀಡಲಾಯಿತು.

ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು ಅವರು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ಮಾಹಿತಿ ಯನ್ನು ಪ್ರತಿ ಮನೆಗೂ ತಲುಪಿಸಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಹಿಂದೆ ಕಾಂಗ್ರೆಸ್ ಸರ್ಕಾರ ಕೈಗೊಂಡ ಜನಪರ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಲಾಗುವುದು ಎಂದರು.

ಪಟ್ಟಣದ ೧೧ ವಾರ್ಡ್ಗಳಲ್ಲೂ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ಮನೆಗೂ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಸರ್ಕಾರದ ಆಡಳಿತ ವೈಫಲ್ಯಗಳ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ತಾಲೂಕು ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಬಿ. ಬಸವರಾಜು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಂಜುನಾಥ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೆಚ್.ಪಿ. ಸಂಧ್ಯಾ, ಸೇವಾದಳ ಪ್ರಧಾನ ಕಾರ್ಯದರ್ಶಿ ಗೌರಮ್ಮ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ, ಉಪಾಧ್ಯಕ್ಷ ಜಮೀರ್, ಸಹ ಕಾರ್ಯದರ್ಶಿ ರಘು, ಭುವನೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.