ಮಡಿಕೇರಿ, ಅ. ೨೮: ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಇಂದು ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಪರ ಜಿಲ್ಲಾಧಿಕಾರಿ ರಾಜುಮೊಗವೀರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್, ವಿದ್ಯಾಲಯದ ಪ್ರಾಂಶುಪಾಲರು ಹಾಜರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ

ಗಾಳಿಬೀಡು ನವೋದಯ ವಸತಿ ಶಾಲೆಯ ಹಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮಡಿಕೇರಿ ನಗರದ ಕೆಲವು ಶಾಲೆಗಳ ವಿದ್ಯಾರ್ಥಿಗಳನ್ನು ಆರ್.ಟಿ.ಪಿ.ಸಿ.ಆರ್. ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಶಾಲಾ ಆಡಳಿತ ಮಂಡಳಿ ಮನವಿ ಮೇರೆಗೆ ಕೋವಿಡ್ ಪರೀಕ್ಷೆ ನಡೆಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ.

ಈಗಾಗಲೇ ನಗರದ ಸಂತ ಜೋಸೆಫರ ಹಾಗೂ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳನ್ನು ಮುಂಜಾಗ್ರತಾ ಕ್ರಮದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಮಂಜುನಾಥ್ ‘ಶಕ್ತಿ’ಗೆ ತಿಳಿಸಿದ್ದಾರೆ.

ಕೊರೊನಾ ಪರೀಕ್ಷೆ ಸೋಂಕು ಕಂಡುಬAದಲ್ಲಿ ಅವರನ್ನು ಐಸೋಲೇಟ್ ಮಾಡಲು ಕ್ರಮವಹಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಕೊರೊನಾ ಪರೀಕ್ಷೆ ನಡೆಸುವ ಚಿಂತನೆ ಇದೆ. ಹಾಗೆಯೇ ಲಸೀಕಾಕರಣಕ್ಕೂ ಒತ್ತು ನೀಡಲಾಗಿದೆ ಎಂದÀÄ ಮಾಹಿತಿ ನೀಡಿದ್ದಾರೆ.