ಸೋಮವಾರಪೇಟೆ,ಅ.೨೭: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತಿ ಸಮಿತಿ ವತಿಯಿಂದ ಇಲ್ಲಿನ ಜೂನಿಯರ್ ಕಾಲೇಜು ಆವರಣದಲ್ಲಿ ಕನ್ನಡಕ್ಕಾಗಿ ನಾವು ಕಾರ್ಯಕ್ರಮದ ಅಂಗವಾಗಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಗೋವಿಂದರಾಜು ಅವರು, ರಾಜ್ಯದಲ್ಲಿ ಕನ್ನಡಕ್ಕೆ ಪ್ರಾಧಾನ್ಯತೆ ನೀಡಬೇಕು. ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಸಮಾಜದಲ್ಲಿ ಹೆಚ್ಚಿನ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ತಮ್ಮ ಕಲಿಕಾ ಹಂತದಲ್ಲಿಯೇ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರ ಚಿಂತನೆಯAತೆ ಈ ಬಾರಿ ರಾಜ್ಯೋತ್ಸವಕ್ಕೂ ಮುನ್ನ ಒಂದು ವಾರಗಳ ಕಾಲ ವಿವಿಧ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು. ತಾ. ೨೮ರಂದು (ಇಂದು) ೧೦.೩೦ಕ್ಕೆ ಪಟ್ಟಣದ ಜೇಸೀ ವೇದಿಕೆ ಮುಂಭಾಗ ಸಾವಿರಾರು ಮಂದಿಯಿAದ ಕನ್ನಡ ಗೀತೆಗಳ ಸಮೂಹ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿಯಿತ್ತರು.

ಮುಖ್ಯ ಅತಿಥಿಯಾಗಿದ್ದ ಬಿಇಓ ಹೆಚ್.ಕೆ. ಪಾಂಡು ಮಾತನಾಡಿ, ಕನ್ನಡ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ಉಳಿವಿಗೆ ಯುವಜನಾಂಗ ಹೆಚ್ಚಿನ ಒತ್ತು ನೀಡಬೇಕು ಎಂದು ಕರೆಯಿತ್ತರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಮಾತನಾಡಿ, ಕನ್ನಡದ ಜಾಗೃತಿ ಎಲ್ಲೆಡೆ ನಡೆಯಬೇಕು. ಮಾತೃ ಭಾಷೆಯ ಬಗ್ಗೆ ಅಭಿಮಾನವಿರಬೇಕು ಎಂದರು.

ಸಭಾ ಕಾರ್ಯಕ್ರಮದ ನಂತರ ಆಕಾಶವಾಣಿ ಕಲಾವಿದರಾದ ಶಾಂತಳ್ಳಿ ಗಣೇಶ್, ಶ್ರೀನಿವಾಸ್, ಶಾಂತ ಮೂರ್ತಿ, ಸೀತಾರಾಂ ತಂಡದಿAದ ಸುಗಮ ಸಂಗೀತ ಗೀತ ಗಾಯನ ನಡೆಯಿತು. ಸುಶ್ರಾವ್ಯ ಸಂಗೀತ ಹಾಗೂ ಜಾಗೃತಿ ಘೋಷಣೆಗಳ ಮೂಲಕ ಗಣೇಶ್ ಮತ್ತು ತಂಡ ಕನ್ನಡದ ಕಂಪನ್ನು ಪಸರಿಸಿತು.

ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಚೌಡ್ಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಕಾಲೇಜು ಪ್ರಾಂಶುಪಾಲ ಬೆಳ್ಳಿಯಪ್ಪ, ಉಪ ಪ್ರಾಂಶುಪಾಲ ಬಸವರಾಜಪ್ಪ, ದೈಹಿಕ ಶಿಕ್ಷಣ ಅಧೀಕ್ಷಕ ಸದಾಶಿವ ಪಲ್ಲೇದ್, ಉಪನ್ಯಾಸಕ ಚಂದ್ರಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಲಿಖಿತಾ ಪ್ರಾರ್ಥಿಸಿ, ಶಿಕ್ಷಕ ಮೂರ್ತಿ ವಂದಿಸಿದರು.