ಮಡಿಕೇರಿ, ಅ. ೨೮: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಸರ್ಕಾರದ ನಿರ್ದೇಶನದಂತೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಬಹುದು. ಪ್ರಬಂಧ ಸ್ಪರ್ಧೆಯ ವಿಷಯ ‘ಕನ್ನಡ ಮತ್ತು ಕೊಡವ ಭಾಷಾ ಭಾಂದವ್ಯ’ ಆಗಿರುತ್ತದೆ (ಮಿತಿ ಗರಿಷ್ಠ ೫ ಹಾಳೆ). ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ತಾ. ೩೧ ರೊಳಗೆ ಆನ್‌ಲೈನ್ ಮೂಲಕ ಅಕಾಡೆಮಿಯ ಇ-ಮೇಲ್ ಞoಜಚಿvಚಿ.ಚಿಛಿಚಿಜemಥಿ@gmಚಿiಟ.ಛಿomಗೆ ಕಳುಹಿಸಿಕೊಡಬಹುದು.
ಇಂದು ಸ್ಪರ್ಧೆ
ತಾ. ೨೯ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕರ್ನಾಟಕ ಹಾಗೂ ಕನ್ನಡ ರಾಜ್ಯೋತ್ಸವದ ಬಗ್ಗೆ, ಕೊಡಗಿನ ಬಗ್ಗೆ ಕನ್ನಡ ಭಾಷೆಯಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ದೂ. ಸಂ-೦೮೨೭೨-೨೨೫೫೬೬ ಅನ್ನು ಸಂಪರ್ಕಿಸಬಹುದಾಗಿದೆ.