ಆರ್ಯನ್ ಖಾನ್‌ಗೆ ಜಾಮೀನು

ಮುಂಬೈ, ಅ. ೨೮: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬAಧಿಸಿದAತೆ ಈ ತಿಂಗಳ ಆರಂಭದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಹಾಗೂ ಇತರ ಇಬ್ಬರಿಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. ಸತತ ಎರಡು ದಿನಗಳ ಸುದೀರ್ಘ ವಿಚಾರಣೆ ಬಳಿಕ ಬಾಂಬೆ ಹೈಕೋರ್ಟ್, ಆರೋಪಿಗಳಾದ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರಿಗೆ ಜಾಮೀನು ನೀಡಿದೆ. ಕಳೆದ ಹಲವು ದಿನಗಳಿಂದ ಮುಂಬೈನ ಅರ್ತರ್ ರೋಡ್ ಜೈಲಿನಲ್ಲಿ ಬಂಧಿಯಾಗಿರುವ ಆರ್ಯನ್ ಖಾನ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಮಾದಕ ವಸ್ತುಗಳ ಬಳಕೆ, ಮಾರಾಟ ಸೇರಿದಂತೆ ಅನೇಕ ಆರೋಪಗಳನ್ನು ಆರ್ಯನ್ ಖಾನ್ ಮೇಲೆ ಎನ್‌ಸಿಬಿ ಹೊರಿಸಿದೆ. ಆರ್ಯನ್ ಖಾನ್ ಪರ ವಾದ ಮಂಡಿಸಿದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು, ಹೊಟೇಲ್‌ನಲ್ಲಿ ಬೇರೆ ಬೇರೆ ಕೊಠಡಿಗಳಲ್ಲಿ ಜನರು ಧೂಮಪಾನ ಮಾಡುತ್ತಿದ್ದರೆ, ಹೊಟೇಲ್‌ನಲ್ಲಿರುವವರೆಲ್ಲರೂ ಪಿತೂರಿ ನಡೆಸುತ್ತಿದ್ದಾರೆ ಎಂದು ಅರ್ಥವೇ? ಅದನ್ನು ಪಿತೂರಿ ಎಂದು ಕರೆಯಲು ಯಾವುದೇ ಆಧಾರ ಇಲ್ಲ ಎಂದರು. ಆರ್ಯನ್ ಖಾನ್ ಚಿಕ್ಕ ವಯಸ್ಸಿನ ಹುಡುಗನಾಗಿದ್ದಾನೆ. ಹಾಗಾಗಿ ಅವನನ್ನು ಜೈಲಿಗೆ ಕಳುಹಿಸುವ ಬದಲು ಪುನರ್ವಸತಿ ನಿಲಯಕ್ಕೆ ಕಳುಹಿಸಬೇಕಿತ್ತು. ಅಲ್ಲದೇ ಆರ್ಯನ್ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಬಂಧನಕ್ಕೂ ಮುನ್ನ ಸೂಕ್ತ ಕಾರಣ ತಿಳಿಸಬೇಕಿತ್ತು. ಬಂಧನಕ್ಕೆ ಸೂಕ್ತ ಕಾರಣ ನೀಡದೆ ಎನ್‌ಸಿಬಿ ದಾರಿ ತಪ್ಪಿಸಿದೆ ಎಂದು ಮುಕುಲ್ ರೋಹ್ಟಗಿ ವಾದಿಸಿದರು. ಆರೋಪಿಗಳ ಪರವಾಗಿ ಮುಕುಲ್ ರೋಹಟಗಿ, ಅಮಿತ್ ದೇಸಾಯಿ ಮತ್ತು ಅಲಿ ಕಾಶಿಫ್ ಖಾನ್ ದೇಶಮುಖ್ ಅವರು ವಾದ ಮಾಡಿದರೆ ಎನ್‌ಸಿಬಿ ಪರವಾಗಿ ಎಎಸ್‌ಜಿ ಅನಿಲ್ ಸಿಂಗ್ ಅವರು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮೂವರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ

ನೀಟ್ ಫಲಿತಾಂಶ ಪ್ರಕಟಕ್ಕೆ ಅನುಮತಿ

ನವದೆಹಲಿ, ಅ. ೨೮: ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ೨೦೨೧ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿಆರ್ ಗವಾಯಿ ಅವರನ್ನೊಳಗೊಂಡ ಸುಪ್ರೀಂ ಪೀಠಕ, ಎನ್‌ಟಿಎಗೆ ನೀಟ್ ಫಲಿತಾಂಶ ಪ್ರಕಟಿಸದಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆಗಳು ಮತ್ತು ಒಎಂಆರ್ ಶೀಟ್‌ಗಳು ಮಿಶ್ರಣಗೊಂಡ ಇಬ್ಬರು ಆಕಾಂಕ್ಷಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಬಾಂಬೆ ಹೈಕೋರ್ಟ್ ಇತ್ತೀಚಿಗೆ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ.

ಆರ್.ಎಸ್.ಎಸ್. ಕಾರ್ಯಕಾರಿ ಮಂಡಳಿಯ ಸಭೆ

ಧಾರವಾಡ, ಅ. ೨೮: ರಾಷ್ಟಿçÃಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕಾರ್ಯಕಾರಿ ಮಂಡಳಿಯ ಸಭೆಯು ಧಾರವಾಡದಲ್ಲಿ (ಕರ್ನಾಟಕ) ಪೂಜ್ಯ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಜೀ ಮತ್ತು ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಅವರು ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ದೇಶದಾದ್ಯಂತದಿAದ ಆಗಮಿಸಿರುವ ಎಲ್ಲ ಪ್ರಾಂತಗಳ ಹಾಗೂ ಕ್ಷೇತ್ರಗಳ ಸಂಘಚಾಲಕ, ಕಾರ್ಯವಾಹ, ಪ್ರಚಾರಕ, ಅಖಿಲ ಭಾರತ ಕಾರ್ಯಕಾರಿಣಿ ಸದಸ್ಯರು ಮತ್ತು ಕೆಲ ಆಯ್ದ ಸಂಘಟನೆಗಳ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿಗಳು ಸೇರಿದಂತೆ ಸುಮಾರು ೩೫೦ ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಸಂಘದ ಕಾರ್ಯದ ಪ್ರಸ್ತುತ ಸ್ಥಿತಿಗತಿ, ಕಾರ್ಯ ವಿಸ್ತಾರ ಹಾಗೂ ಕಾರ್ಯಕರ್ತರ ವಿಕಾಸದ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ. ಬಾಂಗ್ಲಾದೇಶದಲ್ಲಿ ಇತ್ತೀಚಿಗೆ ನಡೆದ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ನಿರ್ಣಯವನ್ನು ಅಂಗೀಕರಿಸಲಾಗುವುದು. ಸಭೆಯ ಆರಂಭದಲ್ಲಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯು ತಾ. ೩೦ ರಂದು ಸಂಜೆ ಮುಕ್ತಾಯಗೊಳ್ಳಲಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ

ತುಮಕೂರು, ಅ. ೨೮: ತುಮಕೂರಿನಲ್ಲಿ ೨ ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಇಬ್ಬರು ವ್ಯಕ್ತಿಗಳು ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ತುಮಕೂರಿನ ತಿಪಟೂರಿನಲ್ಲಿ ಈ ಘಟನೆ ನಡೆದಿದ್ದು, ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸುತ್ತಿದ್ದ ಇಬ್ಬರನ್ನು ತಡೆಯಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದು, ಈ ವೇಳೆ ಬೈಕ್ ಸವಾರರು ಅವರಿಂದ ತಪ್ಪಿಸಿಕೊಂಡು ಹೋಗಿದ್ದಾರೆ. ಬಳಿಕ ಪೊಲೀಸರು ತಮ್ಮ ಬೈಕ್‌ನಲ್ಲಿ ಅವರನ್ನು ಚೇಸ್ ಮಾಡಿದ್ದು, ಹಿಂದೆ ಬರುತ್ತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ವೇಗವಾಗಿ ಬೈಕ್ ಚಲಾಯಿಸಿದ ಸವಾರರು ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಸವಾರರನ್ನು ಬಳುವನೇರಾಳು ಗ್ರಾಮದ ಹಾಲು ಸಹಕಾರ ಸಂಘದ ಮಾಜಿ ಕಾರ್ಯದರ್ಶಿ ನಾಗರಾಜು ಅಲಿಯಾಸ್ ನಾಗಣ್ಣ (೬೪ ವರ್ಷ) ಮತ್ತು ೪೫ ವರ್ಷದ ಚಿದಾನಂದ ಎಂದು ಗುರುತಿಸಲಾಗಿದೆ. ಇಬ್ಬರೂ ತಿಪಟೂರಿಗೆ ತೆರಳುತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಹೊನ್ನವಳ್ಳಿ ಪೊಲೀಸ್ ಠಾಣಾ ಪೊಲೀಸರು ಹೆಲ್ಮೆಟ್ ಧರಿಸದೇ ಪ್ರಯಾಣಿಸುತ್ತಿದ್ದ ಅವರನ್ನು ತಡೆದು ದಾಖಲೆ ಪರಿಶೀಲಿಸಿದ್ದಾರೆ. ಈ ವೇಳೆ ಅವರ ಬಳಿ ಚಾಲನಾ ಪರವಾನಗಿ ಇರಲಿಲ್ಲ. ಬಳಿಕ ಇಬ್ಬರೂ ಪೊಲೀಸರಿಂದ ತಪ್ಪಿಸಿಕೊಂಡಿದ್ದಾರೆ. ಬಳಿಕ ಪೊಲೀಸರು ಅವರನ್ನು ಬೆನ್ನಟ್ಟಿದ್ದು, ಆಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಬಿನೀಶ್ ಕೊಡಿಯೇರಿಗೆ ಜಾಮೀನು

ಬೆಂಗಳೂರು, ಅ. ೨೮: ಡ್ರಗ್ ದಂಧೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇರಳ ಸಿಪಿಐ(ಎಂ) ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಧಾರವಾಡ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉಮಾ, ಬಿನೇಶ್ ಕೊಡಿಯೇರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ, ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದರು. ೨೦೨೧ರ ಫೆಬ್ರವರಿ ತಿಂಗಳಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ವಜಾಗೊಳಿಸಿದ ನಂತರ ಬಿನೇಶ್ ಹೈಕೋರ್ಟ್ ಮೊರೆ ಹೋಗಿದ್ದರು.

ಸುಶೀಲ್ ಕುಮಾರ್ ವಿರುದ್ಧ ಚಾರ್ಜ್ಶೀಟ್

ನವದೆಹಲಿ, ಅ. ೨೮: ದೆಹಲಿಯ ಚತ್ರಸಾಲ್ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ದೆಹಲಿ ಪೊಲೀಸರು ಪ್ರಮುಖ ಆರೋಪಿ ಒಲಿಂಪಿಕ್ಸ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಎರಡನೇ ಆರೋಪ ಪಟ್ಟಿ ದಾಖಲಿಸಿದ್ದಾರೆ. ಇದೇ ಪ್ರಕರಣದಡಿ ಪೊಲೀಸರು ಆಗಸ್ಟ್ ೨ ರಂದು ಸುಶೀಲ್ ಕುಮಾರ್ ಸೇರಿದಂತೆ ಒಟ್ಟು ೧೩ ಮಂದಿ ವಿರುದ್ಧ ಚಾರ್ಜ್ಶೀಟ್ ದಾಖಲಿಸಿದ್ದರು. ದೆಹಲಿಯ ಚತ್ರಸಲ್ ಕ್ರೀಡಾಂಗಣದಲ್ಲಿ ಆಸ್ತಿ ವಿಚಾರಕ್ಕೆ ಸಂಬAಧಿಸಿದAತೆ ಜೂನಿಯರ್ ರಾಷ್ಟಿçÃಯ ಕುಸ್ತಿ ಚಾಂಪಿಯನ್ ಆಗಿದ್ದ ಸಾಗರ್ ಧನ್ಕರ್ ಮೇಲೆ ಸುಶೀಲ್ ಹಾಗೂ ಆತನ ಗೆಳೆಯರು ಹಲ್ಲೆ ನಡೆಸಿದ್ದರು. ಈ ಸಂದರ್ಭ ತೀವ್ರ ಗಾಯಗಳಿಂದ ಧನ್ಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಪಾಕ್ ಗೆಲುವು ಸಂಭ್ರಮಿಸಿದವರ ವಿರುದ್ಧ ಪ್ರಕರಣ

ಲಖನೌ, ಅ. ೨೮: ವಿಶ್ವಕಪ್ ಟಿ-೨೦ ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕ್ ಗೆಲುವನ್ನು ಸಂಭ್ರಮಿಸಿದವರ ವಿರುದ್ಧ ಉತ್ತರ ಪ್ರದೇಶದಲ್ಲಿ ಜಾಗ ಇರಲ್ಲ ಹಾಗೂ ದೇಶದ್ರೋಹದ ಪ್ರಕರಣ ದಾಖಲಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ. ಉತ್ತರ ಪ್ರದೇಶದ ೫ ಜಿಲ್ಲೆಯ ೭ ಆರೋಪಿಗಳು ಪಾಕಿಸ್ತಾನದ ಕ್ರಿಕೆಟ್ ಗೆಲುವನ್ನು ಆಚರಿಸಿದ್ದಾರೆ. ಬದಾಂಯು, ಆಗ್ರಾ, ಬರೇಲಿ, ಸೀತಾಪುರ ಜಿಲ್ಲೆಗಳಲ್ಲಿ ಆರೋಪಿಗಳು ಪಟಾಕಿ ಸಿಡಿಸಿದ್ದಾರಲ್ಲದೆ, ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ. ಇಂಥ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ಅವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಅಂತಾ ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸಿಎಂ ಕಚೇರಿ ಅಧಿಕೃತ ಟ್ವಿಟ್ಟರ್‌ನಿಂದ ಈ ಬಂಧನದ ಬಗ್ಗೆ ಮಾಹಿತಿ ನೀಡಲಾಗಿದೆ.