ಕೂಡಿಗೆ, ಅ. ೨೭: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತಾ ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಗರ್ಭಿಣಿ ಮಹಿಳೆಯರಿಗೆ ಸಾಂಪ್ರದಾಯಿಕ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗ್ರಾ.ಪಂ. ಸದಸ್ಯ ಎಂ.ಎಸ್. ಶಿವಾನಂದ ಮಾತನಾಡಿ, ಗರ್ಭಿಣಿ ಮಹಿಳೆಯರು ಪೌಷ್ಟಿಕ ಆಹಾರ ಸೇವನೆಯೊಂದಿಗೆ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದರು.

ಅAಗನವಾಡಿ ಕಾರ್ಯಕರ್ತೆ ಟಿ.ಎಸ್. ನೀಲಮ್ಮ ಮಾತನಾಡಿ, ಗರ್ಭಿಣಿ ಮಹಿಳೆಯರು ನಿಯಮಿತವಾಗಿ ಸಮತೋಲನ ಆಹಾರ ಸೇವಿಸುವ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರಾದ ಮುರುಳೀಧರ್, ಜ್ಯೋತಿ, ವೇದಾವತಿ, ಅಂಗನವಾಡಿ ಕಾರ್ಯಕರ್ತೆಯರಾದ ಸಿಸಿಲಿಯಾ ಪಾಯ್ಸ್, ಪುಟ್ಟಮ್ಮ, ಸುಚಿತ್ರ ಇತರರು ಇದ್ದರು.