ಕೂಡಿಗೆ, ಅ. ೨೭: ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ಸಭೆ ಗ್ರಾ.ಪಂ. ಅಧ್ಯಕ್ಷ ಚೆಲುವರಾಜ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿಯ ನೂತನ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಕೃಷಿ, ತೋಟಗಾರಿಕೆ, ಕಂದಾಯ, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ತಮ್ಮ ತಮ್ಮ ಇಲಾಖೆಯ ಸೌಲಭ್ಯಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಮೇಶ್, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾ.ಪಂ. ಅನುದಾನದಲ್ಲಿ ಕೈಗೊಳ್ಳುವ ಮಾಹಿತಿ ಮತ್ತು ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಸಮಗ್ರವಾದ ಮಾಹಿತಿಯನ್ನು ಸಭೆಗೆ ನೀಡಿದರು. ಗ್ರಾ.ಪಂ. ಉಪಾಧ್ಯಕ್ಷೆ ಜಯಮ್ಮ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.