ಸೋಮವಾರಪೇಟೆ, ಅ. ೨೭: ಇಲ್ಲಿನ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘವು ರೂ. ೭.೪೦ ಲಕ್ಷ ನಿವ್ವಳ ಲಾಭಗಳಿಸಿದ್ದು, ಸದಸ್ಯರಿಗೆ ಶೇ. ೫ರಷ್ಟು ಲಾಭಾಂಶ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷೆ ಜಲಜಾ ಶೇಖರ್ ತಿಳಿಸಿದರು.
ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಸಂಘದ ೨೫ನೇ ವರ್ಷದ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸದಸ್ಯರಿಗೆ ಹೆಚ್ಚಿನ ಉಪಯೋಗ ಕಲ್ಪಿಸುವ ನಿಟ್ಟಿನಲ್ಲಿ ಸಂಘಕ್ಕೆ ಸ್ವಂತ ಕಟ್ಟಡ ಮಾಡಿಕೊಳ್ಳಲು ಹಿಂದಿನ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ, ಈಗಾಗಲೇ ಮಹದೇಶ್ವರ ಬ್ಲಾಕ್‌ನಲ್ಲಿ ರೂ. ೨೫ ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಿದೆ. ಈ ಕಟ್ಟಡವನ್ನು ನ. ೧೫ ರಂದು ಉದ್ಘಾಟನೆ ಮಾಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಜಯಂತಿ ಶಿವಕುಮಾರ್, ನಿರ್ದೇಶಕರಾದ ಲೋಕೇಶ್ವರಿ ಗೋಪಾಲ್, ಬೇಬಿ ಚಂದ್ರಹಾಸ್, ಉಮಾ ರುದ್ರಪ್ರಸಾದ್, ಶೋಭಾ ಶಿವರಾಜ್, ಸಂಧ್ಯಾರಾಣಿ ಕೃಷ್ಣಪ್ಪ, ರೂಪಶ್ರೀ ರವಿಶಂಕರ್, ಲೀಲಾ ನಿರ್ವಾಣಿ, ಕವಿತಾ ವಿರೂಪಾಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎ. ಪೃಥ್ವಿ ಚಂದ್ರಶೇಖರ್ ಉಪಸ್ಥಿತರಿದ್ದರು.