*ಗೋಣಿಕೊಪ್ಪ, ಅ. ೨೯: ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ತಾ. ೩೧ರಂದು ಗೋಣಿಕೊಪ್ಪ ಕೈಕೇರಿ ವಿಪ್ರ ಸಭಾ ಭವನದಲ್ಲಿ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ ಮಾಹಿತಿ ನೀಡಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಬೆಳಿಗ್ಗೆ ೧೦:೩೦ಕ್ಕೆ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಶ್ರೀಪತಿ ಪಡಂತಾಯರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಈ ಸಂದರ್ಭ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರನ್ನು ಸನ್ಮಾನಿಸಲಾಗುವುದು. ಅಲ್ಲದೇ ಗೋಣಿಕೊಪ್ಪ ಗ್ರಾ.ಪಂ. ಸದಸ್ಯ ಕೆ.ಜೆ. ರಾಮಕೃಷ್ಣ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ನೃತ್ಯ ಸ್ಪರ್ಧೆಯಲ್ಲಿ ವಿಜೇತರಾದ ರಾಹುಲ್ ಎಸ್. ರಾವ್ ಅವರನ್ನು ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.