ಶನಿವಾರಸಂತೆ, ಅ. ೨೯: ಶನಿವಾರಸಂತೆ ಗ್ರಾಮ ಪಂಚಾಯಿತಿ ಕಚೇರಿಯ ಹಿಂಭಾಗ ಉದ್ಯೋಗ ಖಾತ್ರಿ ಯೋಜನೆಯಡಿ ರೂ. ೨೮ ಲಕ್ಷ ವೆಚ್ಚದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ನಿರ್ಮಾಣ ಮಾಡಲು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜ ಶೇಖರ್, ಉಪಾಧ್ಯಕ್ಷ ಎಸ್.ಆರ್. ಮಧು, ಸದಸ್ಯರುಗಳಾದ ಎಸ್.ಸಿ. ಶರತ್‌ಶೇಖರ್, ಎಸ್.ಎನ್. ರಘು, ಸರ್ದಾರ್ ಅಹ್ಮದ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ, ಕಾರ್ಯರ್ದಿ ತಮ್ಮಯ್ಯಾಚಾರ್, ಪಂಚಾಯಿತಿ ಸಿಬ್ಬಂದಿಗಳು ಹಾಗೂ ಊರಿನ ಮುಖಂಡರು ಹಾಜರಿದ್ದರು.