ವೀರಾಜಪೇಟೆ, ಅ. ೨೯: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಗು ಜಿಲ್ಲೆ ಮಡಿಕೇರಿ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಸಾಂಸ್ಕೃತಿಕ ಕಾರ್ಯಕ್ರಮವಾದ ಬೀದಿ ನಾಟಕ ಜಾಗೃತಿ ಕಾರ್ಯಕ್ರಮ ಮಾಲ್ದಾರೆ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.

ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಮೀರ್ ಮತ್ತು ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ವಿಜಯ್‌ಕುಮಾರ್ ಕಂಜರ ನುಡಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾ ವೇದಿಕೆಯ ಈ. ರಾಜು ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಉಳಿಸಿ-ಬೆಳೆಸುವ, ಪೋಷಿಸುವ ಸಲುವಾಗಿ ಈ ರೀತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರೂ ಕನ್ನಡವನ್ನು ಕಡ್ಡಾಯವಾಗಿ ಮಾತನಾಡುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರೌಢಶಾಲಾ ಸಹ ಶಿಕ್ಷಕ ಮಹಮದ್ ಶರೀಫ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಾಲೆಯ ಸಹಶಿಕ್ಷಕರುಗಳಾದ ಈಶ್ವರಿ, ಧನ್ಯ, ಅಮರಯ್ಯ, ಪ್ರತಿಮಾ, ಸೋನಿ, ಪ್ರಸನ್ನ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಮೊಹವiದ್ ಅಲಿ ಉಪಸ್ಥಿತರಿದ್ದರು.

ಇದೇ ಸಂದರ್ಭ ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾ ವೇದಿಕೆಯ ಈ. ರಾಜು ಮತ್ತು ತಂಡದವರಿAದ ಕನ್ನಡಕ್ಕಾಗಿ ನಾವು ಎಂಬ ವಿಚಾರದ ಬಗ್ಗೆ ಗೀತಗಾಯನ ಮತ್ತು ಬೀದಿ ನಾಟಕ ಪ್ರದರ್ಶಿಸಲಾಯಿತು.