ಕುಶಾಲನಗರ, ಅ. ೨೯: ಜಿಲ್ಲೆಯ ಯುವ ನಟಿ ಸಿಂಚನಾ ಚಂದ್ರಮೋಹನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ತುಳುಚಿತ್ರ ‘ಪಿಂಗಾರ’ ಚಲನಚಿತ್ರಕ್ಕೆ ದೆಹಲಿಯಲ್ಲಿ ರಾಷ್ಟಿçÃಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ೬೭ನೇ ಸಾಲಿನ ರಾಷ್ಟಿçÃಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪರಾಷ್ಟçಪತಿ ವೆಂಕಯ್ಯ ನಾಯ್ಡು ಪ್ರಶಸ್ತಿ ಪ್ರದಾನ ಮಾಡಿದರು.
ಚಿತ್ರದ ನಿರ್ದೇಶಕ ಪ್ರೀತಮ್ ಆರ್. ಶೆಟ್ಟಿ ಮತ್ತು ನಿರ್ಮಾಪಕ ಅವಿನಾಶ್ ಶೆಟ್ಟಿ ಪ್ರಶಸ್ತಿಯನ್ನು ಪಡೆದುಕೊಂಡರು. ದಕ್ಷಿಣ ಕನ್ನಡದಲ್ಲಿ ಪ್ರಚಲಿತದಲ್ಲಿರುವ ಭೂತಾರಾಧನೆ ಸುತ್ತ ಹಣೆಯಲಾದ ‘ಪಿಂಗಾರ’ ಚಲನಚಿತ್ರ ೨೦೧೯ ರಲ್ಲಿ ಬೆಂಗಳೂರಿನಲ್ಲಿ ನಡೆದ ಅಂರ್ರಾಷ್ಟಿçÃಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಏಷ್ಯನ್ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ೨೦೨೦ ರಲ್ಲಿ ರಾಷ್ಟಿçÃಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿತ್ತು.