ಮಡಿಕೇರಿ, ಅ. ೨೮: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಕೆಎಸ್‌ಎಸ್ ಕಾಲೇಜ್ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭ ಸುಬ್ರಹ್ಮಣ್ಯದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ವಹಿಸಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯೆ ಶೋಭಾ ಗಿರಿಧರ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿ ಪ್ರಾಂಶುಪಾಲ ಡಾ. ಗೋವಿಂದ್ ಎನ್.ಎಸ್., ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಕೆಎಸ್‌ಎಸ್ ಕಾಲೇಜಿನ ಸಂಚಾಲಕರಾದ ಸುಮಿತ್ರ ಉಪಸ್ಥಿತರಿದ್ದರು. ಸುಮಿತ್ರ ಸ್ವಾಗತಿಸಿ, ಸಿಂಚನ ವಂದಿಸಿದರು. ಶ್ರಾವ್ಯ ಎಂ.ಎನ್. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮುಸ್ಸಿಪ ಚಲನಚಿತ್ರವನ್ನು ಪ್ರದರ್ಶಿಸಲಾಯಿತು.