ಸೋಮವಾರಪೇಟೆ, ಅ. ೨೮: ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ೨೫ನೇ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಈರ್ವರು ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.
ಸಂಘದ ಸದಸ್ಯರಾದ ಸತ್ಯವತಿ ಜಯರುದ್ರಪ್ಪ ಮತ್ತು ಗಾಯತ್ರಿ ದಾಮೋಧರ್ ಅವರುಗಳನ್ನು ಸಂಘದ ಅಧ್ಯಕ್ಷೆ ಜಲಜಾ ಶೇಖರ್, ಉಪಾಧ್ಯಕ್ಷೆ ಜಯಂತಿ ಶಿವಕುಮಾರ್, ಮಾಜಿ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಸೇರಿದಂತೆ ಇತರರು ಸನ್ಮಾನಿಸಿದರು.