ಮಡಿಕೇರಿ, ಅ. ೩೧: ವೀರಾಜಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾ ಹಣಾಧಿಕಾರಿಗಳ ಕಾರ್ಯಾಲಯ ಪೊನ್ನಂಪೇಟೆ ಹಾಗೂ ತಿತಿಮತಿ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ "ಆಜಾದಿ ದಿ ಕಾ ಅಮೃತ ಮಹೋತ್ಸವ ಅಂಗವಾಗಿ ಪಾನ್ ಇಂಡಿಯಾ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಉಪನ್ಯಾಸ ಕಾರ್ಯಕ್ರಮವನ್ನು ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಕ್ಷೆ ವಿಜಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತ, ಮುಖ್ಯ ಶಿಕ್ಷಕಿ ಪಾರ್ವತಿ ಹಾಜರಿದ್ದರು. ವಕೀಲೆ ಕಾವೇರಿ, ಮುಖ್ಯ ಶಿಕ್ಷಕಿ ಪಾರ್ವತಿ ಸ್ವಾಗತಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪಾಧ್ಯಕ್ಷೆ ವಿಜಯ ಕೊರೊನಾ ಜಾಗೃತಿ ಬಗ್ಗೆ ತಿಳಿಸಿಕೊಟ್ಟರು. ಉಪನ್ಯಾಸಕಿ ಪಿಡಿಒ ಮಮತ ಕೋವಿಡ್-೧೯ ನಿರ್ಮೂಲನೆಯ ಬಗ್ಗೆ ಮಾಹಿತಿ ನೀಡಿದರು.

ವಕೀಲೆ ಕಾವೇರಿ ಕಾನೂನು ಬೆಂಬಲದ ಬಗ್ಗೆ ತಿಳಿಸಿದರು. ವಕೀಲೆ ಸಿಂಧೂರ ಕೋವಿಡ್ ನಿಯಂತ್ರಣ ಅಂಕಿ ಅಂಶದೊAದಿಗೆ ಮಾಹಿತಿ ನೀಡಿದರು.

ಉಪನ್ಯಾಸಕ ಶರತ್‌ಕುಮಾರ್ ಮಾತನಾಡಿದರು. ಪಿಡಿಒ ಮಮತ ಕಾರ್ಯಕ್ರಮ ನಿರೂಪಣೆ ಮಾಡಿದರು.