ಗೋಣಿಕೊಪ್ಪಲು, ಅ. ೩೦: ವೀರಾಜಪೇಟೆ ತಾಲೂಕು ಶಿಕ್ಷಣ ಇಲಾಖೆಯ ವತಿಯಿಂದ ಉಪನಿರ್ದೇಶಕರ ನಿರ್ದೇಶನದ ಮೇರೆಗೆ ಪೊನ್ನಂಪೇಟೆಯ ಸಾಯಿಶಂಕರ್ ವಿದ್ಯಾಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಕಾರ್ಯಾಗಾರ ನಡೆಯಿತು.

ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಆಗಮಿಸಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮ ಪಡಿಸುವುದರೊಂದಿಗೆ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾರ್ಗದರ್ಶನ ನೀಡಿದರು. ಸಾಯಿಶಂಕರ್ ವಿದ್ಯಾಸಂಸ್ಥೆಯ ಅಧ್ಯಕ್ಷ ಝರುಗಣಪತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯಗಳಿಗೂ ಒತ್ತು ನೀಡಬೇಕೆಂದು ಕಿವಿಮಾತು ಹೇಳಿದರು.

ತಾಲೂಕಿನ ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್‌ಕುಮಾರ್ ಸೇರಿದಂತೆ ವಿವಿಧ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಮಕ್ಕಳ ಫಲಿತಾಂಶವನ್ನು ಉತ್ತಮಗೊಳಿಸುವಲ್ಲಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊAಡರು.

ಕಾರ್ಯಾಗಾರದಲ್ಲಿ ವೀರಾಜಪೇಟೆ ತಾಲೂಕಿನ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

ಇ.ಸಿ.ಒ. ಅಯ್ಯಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು. ದೇವಣೆಗೆರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಲೋಕೇಶ್ ನಿರೂಪಿಸಿ, ಸÀಹ ಶಿಕ್ಷಕಿ ಸುರೇಖ ಸ್ವಾಗತಿಸಿ, ಭವಾನಿ ವಂದಿಸಿದರು.