ನಾಪೋಕ್ಲು, ಅ. ೩೧: ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಕಸ ಹಾಕುವವÀರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಣವಟ್ಟಿರ ಹರೀಶ್ ಕುಶಾಲಪ್ಪ ಎಚ್ಚರಿಸಿದ್ದಾರೆ.
ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿದ ಅವರು ನಾಪೋಕ್ಲು ಭಾಗಮಂಡಲ ರಸ್ತೆಯ ಹೊಳ್ಳೇಟಿ ಸೇತುವೆ ಬಳಿ ಕಿಡಿಗೇಡಿಗಳು ಕಸ ಹಾಕಿರುವ ಬಗ್ಗೆ ಕಿಡಿಕಾರಿದ ಅವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗುವದು ಎಂದು ತಿಳಿಸಿದ್ದಾರೆ.