ಮಡಿಕೇರಿ, ಅ. ೩೦: ಕರ್ನಾಟಕ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಹಬ್ಬ ಮತ್ತು ಹರಿದಿನಗಳ) ಕಾಯ್ದೆ ೧೯೬೩ ರ ಕಲಂ ೩ ಹಾಗೂ ಕರ್ನಾಟಕ ನಿಯಮಗಳು ೧೯೬೪ರ ನಿಯಮ ೯ರ ಮೇರೆಗೆ ಕೊಡಗು ಜಿಲ್ಲೆಯಾದ್ಯಂತ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಹೊಟೇಲ್, ರೆಸ್ಟೋರೆಂಟ್‌ಗಳು, ರೆಸಾರ್ಟ್ಗಳು, ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಪ್ಲಾಂಟೇಷನ್‌ಗಳು ಹಾಗು ಇತರೆ ಸಂಸ್ಥೆಗಳು ನವೆಂಬರ್ ೧ ರಂದು ಕನ್ನಡ ರಾಜ್ಯೋತ್ಸವದ ದಿನದಂದು ಕಡ್ಡಾಯವಾಗಿ ತಮ್ಮಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ವೇತನ ಸಹಿತ ರಜೆ ನೀಡುವಂತೆ ಸೂಚಿಸಿದೆ. ತಪ್ಪಿದಲ್ಲಿ ಕಾಯ್ದೆ ಮತ್ತು ನಿಯಮಗಳ ಉಲ್ಲಂಘನೆಗಾಗಿ ಸಂಬAಧಿಸಿದವರ ವಿರುದ್ಧ ಕಾಯ್ದೆ ಮತ್ತು ನಿಯಮಗಳಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.