ಕುಶಾಲನಗರ, ಅ. ೩೦: ಕುಶಾಲನಗರ ಪಟ್ಟಣ ವ್ಯಾಪ್ತಿಯ ಕೆಲವು ಕಾಲೇಜ್ ವಿದ್ಯಾರ್ಥಿಗಳು ಗುಂಪು ಘರ್ಷಣೆಗೆ ತೊಡಗಿರುವ ಪ್ರಕರಣಗಳು ಕಂಡು ಬರುತ್ತಿವೆ.
ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಸುತ್ತಮುತ್ತ ನಿರಂತರ ಹೊಡೆದಾಟ ಬಡಿದಾಟಗಳ ದೃಶ್ಯಗಳು ಕಂಡು ಬರುತ್ತಿದ್ದು, ಈ ಬಗ್ಗೆ ಸ್ಥಳೀಯರು ಕಾಲೇಜಿನ ಆಡಳಿತ ಮಂಡಳಿ ಹಾಗೂ ಪೊಲೀಸರಿಗೆ ದೂರು ನೀಡಿದ ಘಟನೆ ನಡೆದಿದೆ.
ಕಳೆದ ೨ ದಿನಗಳಿಂದ ಕುಶಾಲನಗರ ಕನ್ನಡ ಭಾರತಿ ಕಾಲೇಜಿನ ವಿದ್ಯಾರ್ಥಿಯೊಬ್ಬನಿಗೆ ಬೇರೆ ಕಾಲೇಜು ಹುಡುಗರು ಗುಂಪುಗಟ್ಟಿ ಬಂದು ಹಲ್ಲೆ ಮಾಡಿದ ಪ್ರಕರಣ ನಡೆದಿದೆ. ಈ ಸಂದರ್ಭ ಬಸ್ ನಿಲ್ದಾಣದ ಎದುರುಗಡೆ ಇರುವ ಅಯ್ಯಪ್ಪಸ್ವಾಮಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಕೂಡ ಅಡ್ಡಿಯುಂಟಾಗಿತ್ತು.
ಸ್ಥಳೀಯ ಕನ್ನಡ ಭಾರತಿ ಕಾಲೇಜಿನ ವಿದ್ಯಾರ್ಥಿ ಶಪಿ ಎಂಬಾತನಿಗೆ ಶ್ರವಣ್ ಎಂಬಾತನ ನೇತೃತ್ವದಲ್ಲಿ ಕೆಲವು ವಿದ್ಯಾರ್ಥಿಗಳ ಗುಂಪೊAದು ಬಂದು ಹಲ್ಲೆ ಮಾಡಿ ಪರಾರಿಯಾದ ಘಟನೆ ನಡೆದು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಕೂಡ ಹಾನಿಯಾದ ಘಟನೆ ನಡೆಯಿತು.
ಮಾಹಿತಿ ತಿಳಿದ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ.
ಸರ್ಕಾರಿ ಬಸ್ ನಿಲ್ದಾಣ ಆವರಣದಲ್ಲಿ ಕಳೆದ ೧ ವಾರದಿಂದ ಕೆಲ ಪುಂಡ ವಿದ್ಯಾರ್ಥಿಗಳು ಅನಾವಶ್ಯಕ ಗುಂಪುಗಟ್ಟಿ ನಿಲ್ಲುವುದು, ಹೆಣ್ಣುಮಕ್ಕಳನ್ನು ಚುಡಾಯಿಸುವುದು ಮತ್ತಿತರ ಚಟುವಟಿಕೆಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ.
ತಕ್ಷಣ ಸಂಬAಧಿಸಿದ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ ಎಂದು ಸಾರ್ವಜನಿಕರು ಪತ್ರಿಕೆ ಮೂಲಕ ಆಗ್ರಹಿಸಿದ್ದಾರೆ.
-ಚಂದ್ರಮೋಹನ್