ಮಡಿಕೇರಿ, ಅ. ೩೦: ೨೦೨೧-೨೨ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (೫ ರಿಂದ ೧೦ನೇ ತರಗತಿ) ಮೆಟ್ರಿಕ್ ಪೂರ್ವ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ. ರೂ. ೧ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಹಿಂದುಳಿದ ವರ್ಗ ಹಾಗೂ ಇತರೆ ರೂ. ೪೪,೫೦೦ ಆಗಿರುತ್ತದೆ.

ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ ೧೩ ಕೊನೆ ದಿನವಾಗಿದೆ. ಮಾಹಿತಿಗೆ ಇಲಾಖಾ ವೆಬ್‌ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov.iಟಿ ಗೆ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಹಾಯವಾಣಿ ದೂರವಾಣಿ ಸಂಖ್ಯೆ: ೦೮೦-೮೦೫೦೩೭೦೦೦೬ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮತ್ತು ತಾಲೂಕು ಮಟ್ಟದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಜಿಲ್ಲಾ ಕಚೇರಿ ಮಡಿಕೇರಿ ಮೊ. ೯೪೪೮೨೦೫೯೧೯, ಮಡಿಕೇರಿ ತಾಲೂಕು ಕಚೇರಿ ಮೊ. ೯೪೮೦೩೫೬೪೦೯, ವೀರಾಜಪೇಟೆ ತಾಲೂಕು ಕಚೇರಿ ಮೊ. ೮೭೬೨೪೭೬೭೯೦, ಸೋಮವಾರಪೇಟೆ ತಾಲೂಕು ಕಚೇರಿ ಮೊ. ೮೬೬೦೦೧೯೦೪೨ನ್ನು ಕಚೇರಿ ವೇಳೆಯಲ್ಲಿ ಕರೆ ಮಾಡಿ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.