ಮಡಿಕೇರಿ, ಅ. ೩೧: ೨೦೨೧-೨೨ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪ್ರವರ್ಗ-೧ ಮತ್ತು ಅಲೆಮಾರಿ/ಅರೆ ಅಲೆಮಾರಿ ಜನಾಂಗಗಳಿಗೆ ಸೇರಿದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ಒಂದನೇ ತರಗತಿಯಿಂದ ೧೦ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು: ವಾರ್ಷಿಕ ಆದಾಯ ಮಿತಿ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿವೇತನ ರೂ. ೨.೫೦ ಲಕ್ಷ, ಪ್ರವರ್ಗ-೧ರ ವಿದ್ಯಾರ್ಥಿಗಳಿಗೆ ಮಾತ್ರ ರೂ.೧ ಲಕ್ಷ, ಪ್ರವರ್ಗ-೨ಎ,೨ಬಿ,೩ಎ,೩ಬಿ, ಇತರೆ ಹಿಂದುಳಿದ ವರ್ಗಗಳಿಗೆ ರೂ. ೪೪,೫೦೦ ಆಗಿರುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿ/ ದಾಖಲೆ ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್-ಐಡಿ. ವಿದ್ಯಾರ್ಥಿಯ ಆಧಾರ್ ಸಂಖ್ಯೆ, ಪೋಷಕರ ಆಧಾರ್ ಸಂಖ್ಯೆ, ಜಾತಿ ಪ್ರಮಾಣದ ಪತ್ರದ ಆರ್.ಡಿ. ಸಂಖ್ಯೆ, ಆದಾಯ ಪ್ರಮಾಣದ ಪತ್ರದ ಆರ್.ಡಿ. ಸಂಖ್ಯೆ, ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿನಿಲಯ ಪ್ರವೇಶ ಸಂಖ್ಯೆ, ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ಐ.ಎಫ್.ಎಸ್.ಸಿ. ಸಂಖ್ಯೆ ಬ್ಯಾಂಕಿನ ವಿಳಾಸ, ಪೋಷಕರ ಆಧಾರ್ ನಂಬರ್ಗೆ ಲಿಂಕ್ ಮಾಡಿರುವ ಮೊಬೈಲ್ ಸಂಖ್ಯೆ ಹಾಗೂ ಭೌತಿಕ ಅನುಮತಿ ಪತ್ರ ಸಲ್ಲಿಸಬೇಕು.
ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ ೨೧ ಕೊನೆಯ ದಿನವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ಇಲಾಖಾ ವೆಬ್ಸೈಟ್ ತಿತಿತಿ.ssಠಿ.ಞಚಿಡಿಟಿಚಿಣಚಿಞಚಿ.gov.iಟಿ /೮೦೮೦/೨೧೨೨ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮತ್ತು ತಾಲೂಕು ಮಟ್ಟದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಜಿಲ್ಲಾ ಕಚೇರಿ ಮಡಿಕೇರಿ ಮೊ. ೯೪೪೮೨೦೫೯೧೯, ಮಡಿಕೇರಿ ತಾಲೂಕು ಕಚೇರಿ ಮೊ.ಸಂ. ೯೪೮೦೩೫೬೪೦೯, ವೀರಾಜಪೇಟೆ ತಾಲೂಕು ಕಚೇರಿ ಮೊ.ಸಂ. ೮೭೬೨೪೭೬೭೯೦, ಸೋಮವಾರಪೇಟೆ ತಾಲೂಕು ಕಚೇರಿ ಮೊ. ೮೬೬೦೦೧೯೦೪೨ ನ್ನು ಕಚೇರಿ ವೇಳೆಯಲ್ಲಿ ಕರೆ ಮಾಡಿ ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.