ಕೂಡಿಗೆ, ಅ. ೩೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ೧೭ ಲಕ್ಷ ರೂ. ವೆಚ್ಚದ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅಪ್ಪಚ್ಚು ರಂಜನ್ ಗ್ರಾಮಾಂತರ ಪ್ರದೇಶಗಳಲ್ಲೂ ಉತ್ತಮ ಗುಣಮಟ್ಟದ ಕಟ್ಟಡಗಳು ನಿರ್ಮಾಣವಾಗುವುದರಿಂದ ಪ್ರಾಥಮಿಕ ಹಂತಕ್ಕೆ ಹೋಗುವ ಗ್ರಾಮೀಣ ಮಕ್ಕಳ ಕಲಿಕೆಗೆ ಉತ್ತಮವಾದ ಸ್ಥಳವಾಗಲಿದೆ ಎಂದರು. ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಅಣ್ಣಯ್ಯ, ಸದಸ್ಯರಾದ ಟಿ.ಪಿ. ಹಮೀದ್ ಜಯಶ್ರೀ ಅಭಿವೃದ್ಧಿ ಅಧಿಕಾರಿ ಎಂ.ಕೆ. ಆಯಿಷಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕೆಆರ್ ಮಂಜುಳ ಸೇರಿದಂತೆ ವಿವಿಧ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.