ಸುಂಟಿಕೊಪ್ಪ, ಅ. ೩೦: ಕೊರೊನಾ ಹಿನ್ನೆಲೆ ಈ ಬಾರಿಯೂ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲು ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡಪರ ಸಂಘಟನೆಗಳು ನಿರ್ಧರಿಸಿದವು.

ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಅವರ ಅಧ್ಯಕ್ಷತೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು, ವಿವಿಧ ಸಂಘ-ಸAಸ್ಥೆಗಳ ಸಹಯೋಗದಲ್ಲಿ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಸರಳವಾಗಿ ಆಚರಿಸುವ ನಿಟ್ಟಿನಲ್ಲಿ ಸುಂಟಿಕೊಪ್ಪ ಹೃದಯ ಭಾಗದಲ್ಲಿರುವ ಕನ್ನಡ ವೃತ್ತದಲ್ಲಿ ನ.೧ ರ ಬೆಳಿಗ್ಗೆ ೯.೩೦ ಗಂಟೆಗೆ ಕುಶಾಲನಗರದ ಸಾಹಿತಿ ಹಾ.ತಿ. ಜಯಪ್ರಕಾಶ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ದಿನದ ಮಹತ್ವ ಕುರಿತು ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಸುಕನ್ಯಾ ಮಾತನಾಡಲಿದ್ದಾರೆ. ಇದೇ ವೇಳೆ ಕೊರೊನಾ ವಾರಿಯರ್ಸ್ಗಳಾದ ಪಿ.ಎಂ. ಲತೀಫ್, ಬಿ.ಕೆ. ಪ್ರಶಾಂತ್, ಉಪನ್ಯಾಸಕಿ ಡಾ. ಸುಕನ್ಯಾ ಅವರನ್ನು ಸನ್ಮಾನಿಸಲಾಗುವುದು. ಕೊರೊನಾ ಕಡಿಮೆಯಾದಲ್ಲಿ ಮುಂದಿನ ವರ್ಷ ವಿಜೃಂಭಣೆಯಿAದ ಆಚರಿಸ ಲಾಗುವುದು ಎಂದು ನಿರ್ಧರಿಸಲಾಯಿತು.

ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಎಸ್. ಸುನಿಲ್, ಕರವೇ ಅಧ್ಯಕ್ಷ ನಾಗೇಶ್ ಪೂಜಾರಿ, ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ವರ್ಕ್ಶಾಫ್ ಸಂಘದ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್, ಬಿಲ್ಲವ ಸಮಾಜದ ನಿಕಟಪೂರ್ವ ಅಧ್ಯಕ್ಷ ಬಿ.ಕೆ. ಮೋಹನ್, ತಲೆ ಹೊರೆ ಕಾರ್ಮಿಕರ ಕನ್ನಡಾಭಿಮಾನಿಗಳ ಸಂಘದ ಅಧ್ಯಕ್ಷ ಸಂತೋಷ್, ಪತ್ರಕರ್ತ ಸಂಘದ ಜಿಲ್ಲಾ ನಿರ್ದೇಶಕ ರಾಜು ರೈ, ಬಿ.ಕೆ. ಪ್ರಶಾಂತ್, ವಾಸುದೇವ್ ಇತರರು ಇದ್ದರು.