ಮಡಿಕೇರಿ, ಅ.೩೦ : ಬೆಳಕಿನ ಹಬ್ಬ ದೀಪಾವಳಿವನ್ನು ಎಲ್ಲರೂ ಸಡಗರ ಮತ್ತು ಸಂಭ್ರಮದಿAದ ಆಚರಿಸಬೇಕು. ಹಬ್ಬದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವ ಮೂಲಕ ಹಣತೆ ಬೆಳೆಗಿಸಿ ಪರಿಸರ ಸ್ನೇಹಿ ಹಾಗೂ ಸುರಕ್ಷಿತ ಹಸಿರು ದೀಪಾವಳಿ ಆಚರಿಸುವಂತಾಗಬೇಕು ಎಂದು ಮಡಿಕೇರಿ ನಗರ ಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಹೇಳಿದರು.

ಕೊಡಗು ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೆೆÃರಿ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಆಶ್ರಯದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ

"ಪರಿಸರ ಸ್ನೇಹಿ ಹಸಿರು ದೀಪಾವಳಿ" ಆಚರಣೆ ಕುರಿತು ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಪರಿಸರ ಜಾಗೃತಿ ಆಂದೋಲನದಲ್ಲಿ ಹಣತೆ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪಟಾಕಿ ಸಿಡಿತದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವಂತಾಗ ಬೇಕೆಂದರು.

ಪಟಾಕಿ ಸಿಡಿತದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಪೂರಕ ಮಾಹಿತಿ ನೀಡಿದ ಕರ್ನಾಟಕ

(ಮೊದಲ ಪುಟದಿಂದ) ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್ ಮಾತನಾಡಿ, ರಾತ್ರಿ ೧೦ ಗಂಟೆಯಿAದ ಬೆಳಿಗ್ಗೆ ೬ ಗಂಟೆ ತನಕ ಪಟಾಕಿ ಸಿಡಿಸುವುದನ್ನು ನಿಷೇಧಿಸ ಲಾಗಿದೆ. ೧೨೫ ಡೆಸಿಬಲ್ ಕ್ಕಿಂತ ಕಡಿಮೆ ಶಬ್ದ ಹೊಂದಿರುವ ಹಸಿರು ಪಟಾಕಿ ಸಿಡಿಸಬೇಕೇ ವಿನಾಃ ಯಾವುದೇ ರೀತಿಯಲ್ಲೂ ಪರಿಸರಕ್ಕೆ ಹಾನಿ ಯುಂಟು ಮಾಡುವ ಪಟಾಕಿಗಳನ್ನು ಸಿಡಿಸಬಾರದೆಂದು ಸುಪ್ರೀಂ ಕೋರ್ಟ್ ಕೂಡ ಆದೇಶಿಸಿದೆ ಎಂದು ಹೇಳಿ ದರು. ಪಟಾಕಿಗಳು ಹೊರಸೂಸುವ ವಿಷಯುಕ್ತ ಅನಿಲ ಆರೋಗ್ಯ ಸಂಬAಧಿತ ಕಾಯಿಲೆಗಳು ಹಾಗೂ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತವೆ ಎಂದರು.

ಪ್ರತಿಜ್ಞಾ ವಿಧಿ ಬೋಧಿಸಿದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ಪಟಾಕಿ ಮುಕ್ತ ಸುರಕ್ಷತೆ ಮತ್ತು ಆರೋಗ್ಯಕರ ಹಸಿರು ದೀಪಾವಳಿ ಆಚರಣೆಗೆ ಒತ್ತು ನೀಡ ಬೇಕಿದೆ ಎಂದು ಮನವಿ ಮಾಡಿದರು.

ಪಟಾಕಿ ಮುಕ್ತ ಹಾಗೂ ಮಾಲಿನ್ಯ ರಹಿತ ದೀಪಾವಳಿ ಆಚರಣೆ ಕುರಿತು ಈಗಿನಿಂದಲೇ ಮಕ್ಕಳ ಮನಸ್ಸಿನಲ್ಲಿ ಪರಿಸರ ಪ್ರಜ್ಞೆ ಬಿತ್ತಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಪಟಾಕಿ ಸಿಡಿಸುವುದರಿಂದ ವಾಯು, ಶಬ್ದ ಮಾಲಿನ್ಯ ಉಂಟಾಗುತ್ತದೆ. ಇದರಿಂದ ಪರಿಸರ, ಪ್ರಾಣಿ ಪಕ್ಷಿಗಳು ಮತ್ತು ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಆದ್ದರಿಂದ, ನಾವು ಎಲ್ಲಾ ಸಂದರ್ಭಗಳಲ್ಲೂ ಪಟಾಕಿ ಸಿಡಿತವನ್ನು ಕೈಬಿಡಬೇಕು ಎಂದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಹಸಿರು ದೀಪಾವಳಿ ಆಚರಣೆ ಕರಪತ್ರ ಬಿಡುಗಡೆಗೊಳಿಸಿದರು.

ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಜಿಮ್ಮಿ ಸಿಕ್ವೇರಾ ಬಹುಮಾನ ವಿತರಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಟಿ. ವೆಂಕಟೇಶ್, ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ್, ಉಪ ಪ್ರಾಂಶುಪಾಲೆ ಪಿ.ಕೆ. ನಳಿನಿ, ವಿಜ್ಞಾನ ಪರಿಷತ್ತಿನ ಸದಸ್ಯ ಜಿ.ಶ್ರೀಹರ್ಷ, ಬಿ.ಆರ್.ಪಿ.ಕೆ.ಯು. ರಂಜಿತ್ ಇದ್ದರು.

ನಂತರ ನಡೆದ ಪರಿಸರ ಜಾಗೃತಿ ಆಂದೋಲನದಲ್ಲಿ ವಿದ್ಯಾರ್ಥಿಗಳು ಹಣತೆ ಹಚ್ಚೋಣ ಬನ್ನಿ, ದೀಪಾವಳಿ ಆಚರಿಸೋಣ ಬನ್ನಿ, ಪಟಾಕಿ ತ್ಯಜಿಸಿ ಮಾಲಿನ್ಯ ತಡೆಯಿರಿ, ಪಟಾಕಿ ಮುಕ್ತ ದೀಪಾವಳಿ ಆಚರಸೋಣ ಬನ್ನಿ ಎಂಬಿತ್ಯಾದಿ ಪರಿಸರ ಘೋಷಣೆ ಗಳನ್ನು ಪ್ರಚುರಪಡೆಸಿದರು. ಹಸಿರು ದೀಪಾವಳಿ ಆಚರಣೆ ಕುರಿತು ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ. ಬಹುಮಾನ ವಿತರಿಸಲಾಯಿತು.