ಮಡಿಕೇರಿ, ಅ. ೩೧: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ನವೆಂಬರ್‌ನಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ಒಂದು ದಿನದ ಉದ್ಯಮಶೀಲತಾ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಉದ್ಯಮಶೀಲತೆ, ಸೇವಾ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ಲಭ್ಯವಿರುವ ಕೇಂದ್ರ/ ರಾಜ್ಯ ಸರ್ಕಾರದ ಯೋಜನೆಗಳು, ಬ್ಯಾಂಕ್‌ಗಳಿAದ ಸಿಗುವ ಸಾಲ ಸೌಲಭ್ಯಗಳು, ಕೈಗಾರಿಕಾ ನೀತಿಯನ್ವಯ ಸೌಲಭ್ಯಗಳು, ಮುಂತಾದ ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಗುವುದು. ಕೈಗಾರಿಕಾ, ಸೇವಾ ಘಟಕಗಳನ್ನು ಪ್ರಾರಂಭಿಸಲು ಆಸಕ್ತರಿರುವ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸ ಬಹುದಾಗಿದೆ. ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಕೊಡಗು ಜಿಲ್ಲೆಯವರ ಕಾರ್ಯಾಲಯದ ವತಿಯಿಂದ ನೋಂದಣಿ ಅರ್ಜಿಯನ್ನು ಪಡೆದು ಭರ್ತಿಮಾಡಿ ಕಾರ್ಯಾಲಯಕ್ಕೆ ನವೆಂಬರ್ ೧೫ ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿ ದೂ.ಸಂ. ೦೮೨೭೨-೨೨೮೪೩೧, ೨೨೮೭೪೬ ನ್ನು ಸಂಪರ್ಕಿಸಬಹುದು ಹಾಗೂ ನೋಂದಣಿ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.