ನಾಪೋಕ್ಲು, ಅ. ೩೧: ಕೋವಿಯಿಂದ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಲ್ಲಮಾವಟಿ ಗ್ರಾ.ಪಂ. ವ್ಯಾಪ್ತಿಯ ಪೇರೂರು ಗ್ರಾಮದ ಮಂಜಾಟ್ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಭದ್ರ (೫೭) ಆತ್ಮಹತ್ಯೆ ಮಾಡಿಕೊಂಡ ದುದೆೆÊðವಿ. ಈತ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಸಾಲಬಾದೆ ಕಾರಣ ಎನ್ನಲಾಗಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡ ನಾಪೋಕ್ಲು ಪೊಲೀಸರು ಮಡಿಕೇರಿ ಜಿಲ್ಲಾ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.