ಸಿದ್ದಾಪುರ, ಅ ೨೯: ಸಿದ್ದಾಪುರದ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಗ್ರಾ.ಪಂ ನೌಕರರ ಸಂಘದ ಅಧ್ಯಕ್ಷ ಪಿ.ಆರ್ ಭರತ್ ನೇತೃತ್ವದಲ್ಲಿ ಗ್ರಾ.ಪಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಮಾತನಾಡಿದ ಭರತ್ ಸಿದ್ದಾಪುರ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಕೆಲಸ ನೀಡದೇ ಆಡಳಿತ ಮಂಡಳಿ ನಿರ್ಲಕ್ಷö್ಯ ವಹಿಸುತ್ತಿದೆ ಎಂದು ಆರೋಪಿಸಿದರು. ಅಲ್ಲದೇ ಅಸ್ಸಾಮಿನ ಕಾರ್ಮಿಕರಿಗೆ ಕೆಲಸ ನೀಡುತ್ತಿದ್ದು, ಸ್ಥಳೀಯರನ್ನು ಕಡೆಗಣಿಸಲಾಗಿದೆ ಎಂದು ದೂರಿದರು. ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಹಾಗೂ ವೇತನವನ್ನು ಸಮರ್ಪಕವಾಗಿ ನೀಡದೇ ಅನ್ಯಾಯ ಮಾಡುತ್ತಿರುವು ದಾಗಿ ಪಂಚಾಯಿತಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಮಂಜಮ್ಮ, ಸುರೇಶ್, ಗಣೇಶ್, ಮಹದೇವ ಹಾಗೂ ಸಿ.ಐ.ಟಿ.ಯು ಸಂಘಟನೆಯ ಪದಾಧಿಕಾರಿಗಳಾದ ಮಾದೇವ, ಉದಯ ಕುಮಾರ್, ಚಂದ್ರನ್, ವೈಜು ಇನ್ನಿತರರು ಹಾಜರಿದ್ದರು. ನಂತರ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರೀನಾ ತುಳಸಿಗೆ ಮನವಿ ಪತ್ರ ನೀಡಲಾಯಿತು.