ಮಡಿಕೇರಿ, ಅ. ೩೧: ಜೂನ್ ೨೦೨೧ನೇ ತ್ರೆöÊಮಾಸಿಕದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯಾದ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು.
ಸಭೆಯಲ್ಲಿ ಸ್ವಾತಂತ್ರö್ಯದ ೭೫ನೇ ಸಂಭ್ರಮಾಚರಣೆಯ ಸಂದರ್ಭ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ‘ಜಾಗೃತಿ ಅರಿವು' ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು. ವಿಚಕ್ಷಣಾ ಅಧಿಕಾರಿಗಳಾದ ಬಸವರಾಜ್ ಅವರು ಸಭೆಯಲ್ಲಿ ಹಾಜರಿದ್ದ ಎಲ್ಲ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಪ್ರತಿಜ್ಞೆ ಬೋಧಿಸಿದರು.
‘ನಾನು ಲಂಚ ಪಡೆಯುವುದಿಲ್ಲ ಮತ್ತು ನೀಡುವುದೂ ಇಲ್ಲ. ಜೀವನದ ಎಲ್ಲ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳು ಅನುಸರಿಸುತ್ತೇನೆ' ಎಂದು ಲೀಡ್ ಬ್ಯಾಂಕ್ ಆವರಣದಲ್ಲಿ ನಡೆದ ಜಾಗೃತಿ ಅರಿವು ಕಾರ್ಯಕ್ರಮ ಹಾಗೂ ಜೂನ್ ಅಂತ್ಯದ ತ್ರೆöÊಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮೈಸೂರು ವಲಯದ ಪ್ರಾದೇಶಿಕ ವ್ಯವಸ್ಥಾಪಕರಾದ ಜ್ಯೋತಿ ಕೃಷ್ಣನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಬ್ಯಾಂಕಿನ ಒಟ್ಟು ಆರ್ಥಿಕ ವಹಿವಾಟಿನ ಚಿತ್ರಣವನ್ನು ಸಭೆಗೆ ನೀಡಿದರು.
ಭಾರತೀಯ ರಿಸರ್ವ್ ಬ್ಯಾಂಕಿನ ವೆಂಕಟೇಶ್ ಗೋಪಾಲ್ ಮಾತನಾಡಿ, ಬ್ಯಾಂಕುಗಳು ಕೃಷಿಕರಿಗೆ ಒಳಿತು ಮಾಡುವಲ್ಲಿ ಶ್ರಮಿಸಬೇಕು ಎಂದರು. ತದನಂತರ ಜಿಲ್ಲಾಧಿಕಾರಿಯವರು ಜಿಲ್ಲಾವಾರು ಬ್ಯಾಂಕುಗಳ ಪ್ರಗತಿ ಪರಿಶೀಲನೆ ನಡೆಸಿ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಸೂಕ್ತವಾದ ಮಾರ್ಗದರ್ಶನವನ್ನು ನೀಡಿದರು.
ಮುಂದುವರೆದು, ಜಿಲ್ಲಾ ಅಗ್ರಣೀ ಬ್ಯಾಂಕಿನ ಮುಖ್ಯಸ್ಥ ಆರ್.ಕೆ. ಬಾಲಚಂದ್ರ ಅವರು ೨೦೨೦-೨೧ನೇ ಸಾಲಿನ ಜಿಲ್ಲಾ ಅಂಕಿ ಅಂಶಗಳ ಕುರಿತು ಮಾತನಾಡಿ, ಜೂನ್ ವರ್ಷಾಂತ್ಯಕ್ಕೆ ಜಿಲ್ಲೆಯಲ್ಲಿ ಶಾಖೆಗಳ ಒಟ್ಟು ಸಂಖ್ಯೆ ೧೭೪ ಆಗಿದ್ದು, ಒಟ್ಟು ಠೇವಣಿಗಳು ರೂ. ೭೧೨೩ ಕೋಟಿ, ಮುಂಗಡ ರೂ. ೫೧೬೯ ಕೋಟಿ, ಮುಂಗಡ ಹಾಗೂ ಠೇವಣಿಗಳ ಅನುಪಾತ ಪ್ರತಿಶತ ೭೨.೫೮ ಆಗಿರುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಗಳು ಮಾತನಾಡಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಬ್ಯಾಂಕುಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯತೆ ಯನ್ನು ಸಾಧಿಸುವುದರ ಮೂಲಕ ಸರ್ಕಾರಿ ಪ್ರಾಯೋಜಿತ ಯೋಜನೆ ಗಳು ಯಶಸ್ವಿಯಾಗಿ ಅನುಷ್ಠಾನ ಗೊಳಿಸುವಂತೆ ಕರೆ ನೀಡಿದರು. ಸಭೆಯಲ್ಲಿ ವಿವಿಧ ಬ್ಯಾಂಕುಗಳ ಪ್ರಾದೇಶಿಕ ಕಾರ್ಯಾಲಯದ ಪ್ರತಿನಿಧಿ ಗಳು, ಬ್ಯಾಂಕುಗಳ ಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.