ಸಿದ್ದಾಪುರ, ಅ. ೩೦: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹವು ಕೆರೆಯಲ್ಲಿ ಪತ್ತೆಯಾಗಿದೆ. ಹಚ್ಚಿನಾಡು ಗ್ರಾಮದ ನಿವಾಸಿಯಾಗಿರುವ ಮಂಡೇಪAಡ ಸುಬ್ರಮಣಿ (೬೩) ಎಂಬವರು ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಗ್ರಾಮದ ಕೆರೆಯೊಂದರಲ್ಲಿ ಅವರ ಮೃತದೇಹವು ಪತ್ತೆಯಾಗಿದೆ. ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಮೇರೆಗೆ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.