ಮಡಿಕೇರಿ, ಅ.೩೧: ಸ್ವಾತಂತ್ರ‍್ಯ ಹೋರಾಟಗಾರ, ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆಯು ಭಾನುವಾರ ಜರುಗಿತು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಸ್ವಾತಂತ್ರ‍್ಯ ಹೋರಾಟ ಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗಣ್ಯರು ಗೌರವ ನಮನ ಸಲ್ಲಿಸಿದರು.

ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೊಂಬಾರನ ಜಿ.ಬೋಪಯ್ಯ, ರಾಜ್ಯ ಪಶ್ಚಿಮ ಘಟ್ಟಗಳ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆÀ ಸವಿತಾ ರಾಕೇಶ್, ನಗರಸಭೆ ಸದಸ್ಯರಾದ ಶ್ವೇತಾ, ಕಲಾವತಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷಿö್ಮÃ ನಾರಾಯಣ ಕಜೆಗದ್ದೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ತಹಶೀಲ್ದಾರ್ ಮಹೇಶ್, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷÀ ಕೆ.ಡಿ.ದಯಾನಂದ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ, ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ, ಚೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ನವೀನ್ ಅಂಬೆಕಲ್ಲು, ಪ್ರಮುಖರಾದ ಪೇರಿಯನ ಜಯಾನಂದ, ಕೂರನ ಪ್ರಕಾಶ್, ಗಪ್ಪು ಗಣಪತಿ, ದಮಯಂತಿ, ಗುಡ್ಡೆಮನೆ ರಮೇಶ್, ಕೊಡಗು, ಮೈಸೂರು ಮತ್ತು ಬೆಂಗಳೂರು ಗೌಡ ಸಮಾಜಗಳ ಪ್ರಮುಖರು, ಇತರರು ಗುಡ್ಡೆಮನೆ ಅಪ್ಪಯ್ಯ ಗೌಡ ಅವರಿಗೆ ಗೌರವ ನಮನ ಸಲ್ಲಿಸಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ದಂಬೇಕೋಡಿ ಆನಂದ, ಬೈತಡ್ಕ ಜಾನಕಿ ಬೆಳ್ಯಪ್ಪ, ಧನಂಜಯ ಅಗೋಳಿ ಕಜೆ, ಪ್ರೇಮ ರಾಘವಯ್ಯ ಚೊಕ್ಕಾಡಿ, ಪುರುಷೋತ್ತಮ ಕಿರ್ಲಾಯ, ಡಾ. ವಿಶ್ವನಾಥ ಬದಿಕಾನ, ಡಾ. ಕೆ.ಸಿ. ದಯಾನಂದ, ಜಯಪ್ರಕಾಶ್ ಮೊಂಟಡ್ಕ, ಎ.ಟಿ. ಕುಸುಮಾಧರ, ಕಿರಣ್ ಕುಂಬಳಚೇರಿ,

(ಮೊದಲ ಪುಟದಿಂದ) ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನ, ಅಕಾಡೆಮಿ ರಿಜಿಸ್ಟಾçರ್ ಚಿನ್ನಸ್ವಾಮಿ, ಚಿತ್ರ ಕಲಾವಿದರಾದ ಸತೀಶ್ ಇತರರು ಇದ್ದರು. ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಕುರಿತು ಅಂಚೆ ಕಚೇರಿಯಿಂದ ಹೊರ ತಂದಿರುವ ಅಂಚೆ ಲಕೋಟೆಯನ್ನು ಗಣ್ಯರಿಗೆ ನೀಡಲಾಯಿತು. ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಕುರಿತು ಲಿಟ್ಲ್ ಪ್ಲವರ್ ಶಾಲೆಯ ವಿದ್ಯಾರ್ಥಿಗಳು ನಮನಗೀತೆ ಹಾಡಿದರು. ಅಕಾಡೆಮಿ ಸದಸ್ಯ ಧನಂಜಯ ಅಗೋಳಿಕಜೆ ಸ್ವಾಗತಿಸಿ, ನಿರೂಪಿಸಿದರು,

ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರನ್ನು ಗಲ್ಲಿಗೇರಿಸಿದ್ದ ನಗರದ ಕೋಟೆ ಆವರಣದ ಸ್ಥಳದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಗುಡ್ಡೆಮನೆ ಕುಟುಂಬದವರು ಹಾಗೂ ಇತರರು ಪುಷ್ಪ ನಮನ ಸಲ್ಲಿಸಿದರು. ಬಳಿಕ ಪ್ರೇಮ ರಾಘವಯ್ಯ ಚೊಕ್ಕಾಡಿ, ಪಾಂಡನ ಶಾರದ ನಾಗೇಶ್, ರುಕ್ಷಿö್ಮಣಿ ದುಗ್ಗಪ್ಪ ಅವರು ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಲಾವಣಿ ಪದ ಹಾಡಿದರು.