ಮಡಿಕೇರಿ, ನ. ೧: ಮೈಸೂರಿನ ಕೊಡಗು ಗೌಡ ಸಮಾಜದ ವತಿಯಿಂದ ಗುಡ್ಡೆಮನೆ ಅಪ್ಪಯ್ಯ ಗೌಡರ ಭಾವಚಿತ್ರದ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸ್ಮರಿಸಲಾಯಿತು. ಸಮಾಜದ ಅಧ್ಯಕ್ಷ ತೋಟಂಬೈಲ್ ಈ. ಮನೋಹರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪ್ಪಯ್ಯ ಗೌಡರು ಬ್ರಿಟಿಷರೊಂದಿಗೆ ಹೋರಾಡಿ, ದೇಶಕ್ಕಾಗಿ ಪ್ರಾಣತೆತ್ತರು ಎಂದರು. ಈ ಸಂದರ್ಭ ಸಮಾಜದ ಪ್ರಮುಖರು ಇದ್ದರು.