ಕುಶಾಲನಗರ, ಅ. ೩೧: ಕುಶಾಲನಗರ ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ೬೬ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನವೆಂಬರ್ ಒಂದರAದು ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಬೆಳಿಗ್ಗೆ ೯.೩೦ ಗಂಟೆಗೆ ಧ್ವಜಾರೋಹಣ ನಡೆಯಲಿದೆ. ತಾಲೂಕು ತಹಶೀಲ್ದಾರ್ ಟಿ ಎಂ ಪ್ರಕಾಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಸಾಹಿತಿ ಭಾರದ್ವಾಜ ಕೆ ಆನಂದತೀರ್ಥ ಅವರು ಪಾಲ್ಗೊಳ್ಳಲಿದ್ದಾರೆ.