ಕುಶಾಲನಗರ, ಅ. ೩೧: ತ್ರಿಪುರಾದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು ಗುರಿಯಾಗಿಸಿ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿಷಯದಲ್ಲಿ ಬಿಜೆಪಿಯೇತರ ಪಕ್ಷಗಳ ಮೌನ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಎಸ್.ಡಿ.ಪಿ.ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಎಸ್‌ಡಿಪಿಐ ಪಕ್ಷದ ಕೊಡಗು ಜಿಲ್ಲಾ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಉಸ್ಮಾನ್ ಮಾತನಾಡಿ, ಭಾರತದ ಮುಸ್ಲಿಮರ ಮೇಲೆ ದಾಳಿ ನಡೆಸುವಾಗ ಬಿಜೆಪಿಯೇತರ ಪಕ್ಷಗಳು ಮೌನ ವಹಿಸಿರುವುದು ಸಂವಿಧಾನ ಮೌಲ್ಯಕ್ಕೆ ಅಪಚಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ, ಕುಶಾಲನಗರ ಘಟಕದ ಅಧ್ಯಕ್ಷ ಬಾಷಾ, ಮಡಿಕೇರಿ ನಗರಸಭಾ ಸದಸ್ಯ ಬಶೀರ್, ಜಿಲ್ಲಾ ಸದಸ್ಯರಾದ ಅಬ್ದುಲ್ ಅಡ್ಕರ್, ಪಿಎಫ್‌ಐ ಜಿಲ್ಲಾಧ್ಯಕ್ಷ ಶೌಕತಾಲಿ, ನಗರಾಧ್ಯಕ್ಷ ಹನೀಫ್ ಮತ್ತಿತರರಿದ್ದರು.