ಸಿದ್ದಾಪುರ, ನ. ೧: ಅರೆಕಾಡು ಗ್ರಾಮದ ಬಲಂಜಿಕೆರೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ಐದ್ರೋಡಮ್ಮ ದೇವಾಲಯದ ವಾರ್ಷಿಕೋತ್ಸವ ತಾ. ೪ ರಂದು ನಡೆಯಲಿದೆ.

ಅಂದು ಬೆಳಿಗ್ಗೆ ಗಣಪತಿ ಹೋಮದೊಂದಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.