ಕೂಡಿಗೆ, ನ. ೧: ನೀರು ಅತ್ಯಮೂಲ್ಯ ಸಂಪತ್ತು. ಅದನ್ನು ಭವಿಷ್ಯಕ್ಕಾಗಿ ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಲ ತಜ್ಞರೂ ಆದ ಕಾವೇರಿ ನೀರಾವರಿ ನಿಗಮದ ಹಾರಂಗಿ ಅಣೆಕಟ್ಟು ಉಪವಿಭಾಗದ ಇಂಜಿನಿಯರ್ ಹೆಚ್.ಪಿ. ಸಿದ್ದರಾಜ್ ಹೇಳಿದರು.

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ., ರಾಷ್ಟಿçÃಯ ಹಸಿರು ಪಡೆ ಇಕೋ-ಕ್ಲಬ್, ವಿಜ್ಞಾನ ಸಂಘ ಹಾಗೂ ಎನ್.ಎಸ್.ಎಸ್. ಘಟಕದ ಆಶ್ರಯದಲ್ಲಿ ವಿಜ್ಞಾನ ಅರಿವು ಉಪನ್ಯಾಸ ಮಾಲೆ-೨ ರ ಅಂಗವಾಗಿ "ನೀರಿನ ಸಂರಕ್ಷಣೆ ಮತ್ತು ನಿರ್ವಹಣೆ" ಕುರಿತಂತೆ ಏರ್ಪಡಿಸಿದ್ದ ಉಪನ್ಯಾಸ ಹಾಗೂ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಅವರು ನೀರಿನ ಸಂರಕ್ಷಣೆಯ ಮಹತ್ವ ಕುರಿತು ವಿವರಿಸಿದರು.

ನೀರಿನ ಅಪವ್ಯಯ ಮತ್ತು ಮಾಲಿನ್ಯವನ್ನು ತಡೆಗಟ್ಟುವ ಕಡೆ ನಾವೆಲ್ಲರೂ ಗಮನಹರಿಸಬೇಕು. ಇಲ್ಲದಿದ್ದರೆ ಭೂಮಿಯ ಮೇಲೆ ಜೀವಿಗಳು ಬದುಕುಳಿಯುವುದು ಅಸಾಧ್ಯವಾಗುತ್ತದೆ. ನೀರಿನ ಅಭಾವವನ್ನು ತಡೆಗಟ್ಟಲು ಇರುವ ಒಂದೇ ಮಾರ್ಗವೆಂದರೆ ನೀರಿನ ಮಿತ ಬಳಕೆ ಮತ್ತು ಸಂರಕ್ಷಣೆ ಮಾತ್ರ ಎಂದರು.

ನದಿ, ಕೊಳ, ಕೆರೆ, ಬಾವಿಯ ನೀರನ್ನು ಸಂರಕ್ಷಿಸುವ ಜತೆಗೆ ನೀರಿನ ಮೂಲವಾದ ಮಳೆ ನೀರನ್ನು ಉಳಿಸಿಕೊಳ್ಳಬೇಕಾಗಿದೆ. ಮಳೆ ನೀರು ಕೊಯ್ಲು ಮೂಲಕ ಮಳೆ ನೀರನ್ನು ವರ್ಷಪೂರ್ತಿ ನಮ್ಮ ಬಳಕೆಗೆ ಹಿಡಿದಿಟ್ಟುಕೊಳ್ಳಬೇಕು ಎಂಬ ಸಲಹೆ ನೀಡಿದರು.

ಬಯಲು ಸೀಮೆಯ ಕೆಲವು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಲೇ ಇದೆ. ಆದರೂ ನಾವು ಎಚ್ಚೆತ್ತುಕೊಂಡಿಲ್ಲ ಎಂಬುದು ನೋವಿನ ಸಂಗತಿ ಎಂದರು.

ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕರೂ ಆದ ಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, "ವಿಜ್ಞಾನ ಅರಿವು' ಉಪನ್ಯಾಸ ಮಾಲೆಯ ಮೂಲಕ ಮಕ್ಕಳು ಮತ್ತು ಸಮುದಾಯದಲ್ಲಿ ವಿಜ್ಞಾನದಲ್ಲಿ ಆಸಕ್ತಿ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ನೀರಿನ ಸಂರಕ್ಷಣೆಗಾಗಿ ನಾವು ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ನೀರನ್ನು ಮಿತಬಳಕೆ ಮಾಡಲು ನಾವು ಸರಳ ಸೂತ್ರಗಳನ್ನು ಅಳವಡಿಸಿ ಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಕೂಡ ಆಗಿದೆ ಎಂದರು.

ಸAವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಶಾಲನಗರ ರೋಟರಿ ಇನ್ನರ್ ವ್ಹೀಲ್ ಕ್ಲಬ್‌ನ ಅಧ್ಯಕ್ಷೆ ರೂಪಾ ಉಮಾಶಂಕರ್, ನೀರಿನ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳು ಹಾಗೂ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಕೂಡ ಜನರಲ್ಲಿ ನೀರಿನ ಮಿತಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಮಕ್ಕಳಿಗೆ ಉಪಯುಕ್ತ ಚಟುವಟಿಕೆ ಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಸಾಮಾಜಿಕ ಕಾರ್ಯಕರ್ತರು ದಾನಿಗಳು ಅದ ವಿ.ಎನ್. ಉಮಾಶಂಕರ್ ಮಾತನಾಡಿ, ಶಾಲೆಯಲ್ಲಿ ಇಂತಹ ಜಾಗೃತಿ ಕಾರ್ಯ ಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ನೆಲ-ಜಲ ಸಂರಕ್ಷಣೆ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸುತ್ತಿರುವುದು ಉತ್ತಮ ವಾದದು. ವಿದ್ಯಾರ್ಥಿಗಳು ಭವಿಷ್ಯದಲ್ಲಿ ತಮ್ಮನ್ನು ಪರಿಸರ ರಾಯಭಾರಿಗಳಾಗಿ ತೊಡಗಿಸಿಕೊಳ್ಳಬೇಕು ಎಂದರು.

ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಡಿ. ರಮೇಶ್, ಶಿಕ್ಷಕರಾದ ಅನ್ಸಿಲಾ ರೇಖಾ, ಎಸ್.ಎಂ. ಗೀತಾ, ಸಿಬ್ಬಂದಿ ಎಂ. ಉಷಾ ಸಂವಾದದಲ್ಲಿ ಭಾಗವಹಿಸಿದ್ದರು.

ನಂತರ ನೀರಿನ ಸಂರಕ್ಷಣೆ ಕುರಿತಂತೆ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳು ನೀರಿನ ಸಂರಕ್ಷಣೆ ಏಕೆ ಮುಖ್ಯ? ನೀರಿನ ಸಂರಕ್ಷಣಾ ವಿಧಾನಗಳು ಹೇಗೆ? ಮಳೆ ನೀರು ಕೊಯ್ಲು ನಿರ್ವಹಣೆ ಹೇಗೆ? ಮತ್ತು ನೀರಿನ ಅಪವ್ಯಯ ಹಾಗೂ ಮರುಬಳಕೆ ಕ್ರಮಗಳೇನು? ಭವಿಷ್ಯತ್ತಾಗಿ ನೀರನ್ನು ಹೇಗೆ ಸಂಗ್ರಹಿಸುವುದು ಎಂಬಿತ್ಯಾದಿ ಹಲವಾರು ಪ್ರಶ್ನೆಗಳನ್ನು ಕೇಳುವ ಮೂಲಕ ಇಂಜಿನಿಯರ್ ಸಿದ್ದರಾಜ್ ಅವರಿಂದ ಸಮಗ್ರವಾದ ಉತ್ತರವನ್ನು ಪಡೆದುಕೊಂಡರು.