ಕುಶಾಲನಗರ, ನ. ೧: ನಿರಂತರ ಕಲಿಕೆ ಮತ್ತು ಬಳಕೆ ಮೂಲಕ ಕನ್ನಡ ಭಾಷೆ ಉಳಿಸಿ ಬೆಳೆಸುವ ಕೆಲಸವಾಗಬೇಕೇ ಹೊರತು ಭಾಷೆಗಳು ಕೇವಲ ಭಾಷಣ, ಹೋರಾಟ, ಭ್ರಮೆಗಳ ಮೂಲಕ ಅಭಿವೃದ್ಧಿ ಹೊಂದಲು ಅಸಾಧ್ಯ ಎಂದು ಹಿರಿಯ ಸಾಹಿತಿ ಭಾರದ್ವಾಜ ಕೆ. ಆನಂದತೀರ್ಥ ಅಭಿಪ್ರಾಯಪಟ್ಟರು.

ಅವರು ಕುಶಾಲನಗರದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ನಡೆದ ೬೬ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿ, ಹಲವು ಭಾಷೆಗಳ ನಡುವೆ ಕನ್ನಡಿಗರಾಗಿ ಇದ್ದು ತಮ್ಮನ್ನು ಗುರುತಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಭಾಷೆಯ ಉಳಿವಿನೊಂದಿಗೆ ನಾಡಿನ ನೆಲ ಜಲದ ಉಳಿವಿಗಾಗಿ ಪ್ರತಿಯೊಬ್ಬರೂ ಪಣತೊಡಬೇಕಾಗಿದೆ ಎಂದರು. ಜೀವನದಿ ಕಾವೇರಿ ಕಲುಷಿತ ತಪ್ಪಿಸಿ ನದಿಯ ಸಂರಕ್ಷಣೆಗಾಗಿ ಯೋಜನೆಗಳು ರೂಪುಗೊಳ್ಳಬೇಕಾಗಿದೆ ಎಂದರು.

ಕುಶಾಲನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಮಗ್ರ ಅಧ್ಯಯನದ ಬಗ್ಗೆ ಚಿಂತನೆ ಹರಿಸಬೇಕಾಗಿದೆ. ಊರಿನ ಇತಿಹಾಸದ ಬಗ್ಗೆ ಯುವ ಜನತೆಗೆ ತಿಳಿಯಪಡಿಸುವ ಕೆಲಸ ಆಗಬೇಕಿದೆ ಎಂದರು.

ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿದ ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್, ರಾಜ್ಯದಲ್ಲಿ ಶಿಕ್ಷಣದಲ್ಲಿ ಕನ್ನಡಕ್ಕೆ ಪ್ರಮುಖ ಆದ್ಯತೆ ನೀಡಬೇಕು, ಭಾಷೆ ಉಳಿವಿಗೆ ಪ್ರತಿಯೊಬ್ಬರ ಸಹಕಾರದ ಅಗತ್ಯತೆ ಇದೆ. ಸಂಘಟನೆಗಳು ನಿರಂತರ ಕಾರ್ಯಕ್ರಮಗಳ ಮೂಲಕ ಜನತೆಗೆ ಭಾಷೆಯ ಬಗ್ಗೆ ಅರಿವು, ಜಾಗೃತಿ ಮೂಡಿಸಬೇಕು, ವ್ಯವಹಾರದಲ್ಲಿ ಕನ್ನಡವನ್ನೇ ಬಳಸುವಂತೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು.

ಸಮಾರAಭದ ಅಧ್ಯಕ್ಷತೆ ವಹಿಸಿದ್ದ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಕನ್ನಡಕ್ಕೆ ಒತ್ತು ನೀಡುವ ಕೆಲಸವಾಗಬೇಕು. ಮಾತೃ ಭಾಷೆ ಉಳಿಸುವ ಕೆಲಸ ನಿರಂತರವಾಗಿರಬೇಕು. ಇತರರ ಜತೆ ಕನ್ನಡ ಮಾತನಾಡುವ ರೂಢಿ ಅಗತ್ಯ ಎಂದರಲ್ಲದೆ ಭಾಷಾ ಅಭಿಮಾನದ ಜತೆ ಕನ್ನಡ ಮನೆಮನೆಯ ಭಾಷೆಯಾಗಬೇಕು ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ರಾಷ್ಟç ಮತ್ತು ಕನ್ನಡ ಧ್ವಜಾರೋಹಣ ನೆರವೇರಿಸಿ ನಾಡಗೀತೆ ಹಾಡಲಾಯಿತು.

ಪ.ಪಂ. ಉಪಾಧ್ಯಕ್ಷೆ ಸುರಯ್ಯಾ ಬಾನು, ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎA. ಚರಣ್, ಎಪಿಸಿಎಂಎಸ್ ಅಧ್ಯಕ್ಷ ಎಂ.ಎನ್. ಕೊಮಾರಪ್ಪ, ಉಪಾಧ್ಯಕ್ಷ ಟಿ.ಬಿ. ಜಗದೀಶ್, ಪೊಲೀಸ್ ಉಪಾಧೀಕ್ಷಕ ಎಚ್.ಎಂ. ಶೈಲೇಂದ್ರ, ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಮತ್ತಿತರರಿದ್ದರು.

ಮುಖ್ಯ ಶಿಕ್ಷಕಿ ಪುಷ್ಪಾ ಸ್ವಾಗತಿಸಿದರು. ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿ, ಮುಖ್ಯ ಶಿಕ್ಷಕ ಸೂದನ ಗೋಪಾಲ್ ವಂದಿಸಿದರು.