ಕೂಡಿಗೆ, ಅ. ೩೧: ಕುಶಾಲನಗರ - ಹಾಸನ ಹೆದ್ದಾರಿಯಲ್ಲಿ ಕುಡಿದು ವಾಹನಗಳ ಚಾಲನೆ ಮಾಡುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ತಪಾಸಣೆಯನ್ನು ಕುಶಾಲನಗರ ಗ್ರಾಮಾಂತರ ಪೊಲೀಸ್ ತಂಡ ನಡೆಸುತ್ತಿದೆ. ಕೂಡಿಗೆಯಲ್ಲಿ ಕುಡಿದು ವಾಹನ ಚಾಲನೆ ಮಾಡುವವರನ್ನು ತಪಾಸಣೆ ಮಾಡಿ ದಂಡ ವಿಧಿಸುವ ಕಾರ್ಯ ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ನೇತೃತ್ವದಲ್ಲಿ ನಡೆಯುತ್ತಿದೆ.

ಕುಶಾಲನಗರ ಹಾಸನ ಹೆದ್ದಾರಿಯಲ್ಲಿ ಕುಡಿದು ವಾಹನ ಚಾಲನೆ ಮಾಡಿ ಮತ್ತು ಹೆಲ್ಮೆಟ್ ಹಾಕದೇ ಬೈಕ್ ಚಾಲನೆ ಮಾಡುವ ಯುವಕರಿಗೆ ದಂಡ ವಿಧಿಸಲಾಗುತ್ತಿದೆ. ಹೆದ್ದಾರಿಯಲ್ಲಿ ಕೂಡ್ಲೂರು ಕೈಗಾರಿಕಾ ಕೇಂದ್ರಕ್ಕೆ ಬರುವ ಕಾರ್ಮಿಕರಿಗೆ ಮತ್ತು ಸಾರ್ವಜನಿಕರಿಗೆ ಕಾನೂನಿನ ಅರಿವಿನ ಬಗ್ಗೆಯೂ ತಿಳುವಳಿಕೆಯನ್ನು ನೀಡಲಾಗುತ್ತಿದೆ.