ಭಾಗಮಂಡಲ, ನ. ೧: ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭಾಗಮಂಡಲದ ವಾಜಪೇಯಿ ವಸತಿ ಶಾಲೆಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳ ಸಭೆ ನಡೆಸಿದರು. ಕಳೆದ ಏಳು ತಿಂಗಳ ಹಿಂದೆ ಭಾಗಮಂಡಲದಲ್ಲಿ ವಾಜಪೇಯಿ ವಸತಿ ಶಾಲೆಯನ್ನು ಉಸ್ತುವಾರಿ ಸಚಿವರು ಉದ್ಘಾಟಿಸಿದ್ದರು. ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದ ಬಗ್ಗೆ ವಿದ್ಯಾರ್ಥಿಗಳಿಂದ ಹಾಗೂ ಪೋಷಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಹಿಂದೆ ಶಾಸಕ ಕೆ.ಜಿ. ಬೋಪಯ್ಯ ಹಾಗೂ ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ ದರು. ಮತ್ತಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಸಚಿವರು ಶಾಲೆಯ ಕುಂದು ಕೊರತೆಗಳನ್ನು ಪರಿಶೀಲಿಸಿದರು. ವಿದ್ಯುತ್ ಸಮಸ್ಯೆ ಇದೆ. ಜನರೇಟರ್ ವ್ಯವಸ್ಥೆ ಕಲ್ಪಿಸಿ. ಮಕ್ಕಳಿಗೆ ಮಲಗಲು ವ್ಯವಸ್ಥೆ ಇಲ್ಲ. ನೀರಿನ ಕೊರತೆ ಕಾಡುತ್ತಿದೆ.. ಹೀಗೆ ಹತ್ತಾರು ಸಮಸ್ಯೆಗಳನ್ನು ಪೋಷಕರು ಮುಂದಿಟ್ಟರು.
ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಪಿಯುಸಿ ವಿಭಾಗಕ್ಕೆ ೮೫ ವಿದ್ಯಾರ್ಥಿಗಳು ದಾಖಲಾಗಿದ್ದು, ಇನ್ನು ೧೭ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಬಾಕಿ ಉಳಿದಿದೆ. ಮೆರಿಟ್ ಆಧಾರದಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಿ ಸ್ಥಳೀಯರಿಗೆ ಆದ್ಯತೆ ನೀಡಿ ಎಂದು ಸಚಿವರು ಸೂಚಿಸಿದರು. ಪ್ರಯೋಗಾಲಯ ವನ್ನು ಸೂಕ್ತವಾಗಿ ನಿರ್ವಹಿಸಿ ಮತ್ತು ದೈಹಿಕ ಶಿಕ್ಷಕರನ್ನು ಕೂಡಲೇ ನೇಮಿಸಿ ಎಂದು ಹೇಳಿದರು. ವಸತಿ ಶಾಲೆಗೆ ಪೋಷಕರ ಸಮಿತಿಯೊಂದನ್ನು ರಚಿಸಿಕೊಂಡಲ್ಲಿ ಸಮಸ್ಯೆಗಳ ಶೀಘ್ರ ಸ್ಪಂದನೆಗೆ ಅವಕಾಶವಾಗಲಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದರು. ಬಿಸಿಎಂ ಹಾಸ್ಟೆಲ್ ಅಧಿಕಾರಿ ಮಂಜುನಾಥ್, ಕವಿತಾ ಗ್ರಾಮ ಪಂಚಾಯಿತಿ ಸದಸ್ಯ ಕಾಳನ ರವಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾಜೀವ್ ಅಮೆ ಬಾಲಕೃಷ್ಣ ಇನ್ನಿತರರು ಹಾಜರಿದ್ದರು.