ಕೂಡಿಗೆ, ನ. ೨: ಪಾನ್ ಇಂಡಿಯಾ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನ ಅಂಗವಾಗಿ ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ವಹಿಸಿದ್ದರು. ಮಹಿಳೆಯರ ಮೇಲಿನ ದೌರ್ಜನ್ಯ, ಅವುಗಳಿಗೆ ಪರಿಹಾರ ಎಂಬ ವಿಷಯದ ಬಗ್ಗೆ ವಕೀಲ ಕೆ.ಬಿ. ಮೋಹನ್ ಮಾತನಾಡಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಸದಸ್ಯರಾದ ಟಿ.ಪಿ. ಹಮೀದ್, ಅರುಣ್ಕುಮಾರ್, ಶಿವಕುಮಾರ್, ಗಿರೀಶ್, ಅನಂತ್, ಜಯಶ್ರೀ ಸೇರಿದಂತೆ ಸದಸ್ಯರು, ಅಂಗನವಾಡಿ ಕಾರ್ಯಕರ್ತೆರು, ಆಶಾ ಕಾರ್ಯಕರ್ತೆರು ಮಹಿಳಾ ಸಂಘದ ಪದಾಧಿಕಾರಿಗಳು, ಸ್ವ ಸಹಾಯ ಸಂಘದ ಮಹಿಳೆಯರು, ಗ್ರಾಮಸ್ಥರು ಭಾಗವಹಿಸಿದ್ದರು.